ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಮಹಾತ್ಮ ಗಾಂಧೀಜಿಯವರ ರಾಮ ರಾಜ್ಯದ ಕನಸು ನನಸು ಮಾಡಲು ದೇಶದ ಪ್ರತಿಯೊಬ್ಬ ಪ್ರಜೆಯೂ ಸಂಕಲ್ಪ ತೊಡಬೇಕು ಎಂದು ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಗುರುವಾರ ಹೇಳಿದರು.ಪಟ್ಟಣದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದಲ್ಲಿ ಎಂ.ಎಚ್. ಚನ್ನೇಗೌಡ ವಿದ್ಯಾ ಸಂಸ್ಥೆ ಮತ್ತು ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 120ನೇ ಜಯಂತ್ಯುತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಗಾಂಧೀಜಿ ಮತ್ತು ಶಾಸ್ತ್ರಿ ಅವರ ತ್ಯಾಗ, ಬಲಿದಾನ ನಮಗೆ ಆದರ್ಶಪ್ರಾಯವಾಗಿದೆ. ಈ ಇಬ್ಬರ ಹೋರಾಟದ ಫಲವಾಗಿ ನಾವಿಂದು ಸ್ವಾತಂತ್ರವನ್ನು ಅನುಭವಿಸುತ್ತಿದ್ದೇವೆ ಎಂದರು.ಗಾಂಧೀಜಿಯವರ ವಿಚಾರಗಳಲ್ಲಿ ಮುಖ್ಯ ಅಡಿಪಾಯವಾಗಿರುವ ಸತ್ಯ ಮತ್ತು ಅಹಿಂಸಾ ತತ್ವಗಳೊಂದಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದು ಮಾತ್ರವಲ್ಲದೆ ಇಡೀ ಜಗತ್ತಿಗೆ ಶಾಂತಿ, ಸಮಾನತೆ, ಮಾನವೀಯ ಮೌಲ್ಯಗಳ ಸಂದೇಶ ನೀಡಿರುವ ಅವರ ಚಿಂತನೆಗಳು ಸತ್ಯಾಗ್ರಹ, ಸ್ವದೇಶಿ, ಶ್ರಮದಾನ, ಸರ್ವೋದಯ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳನ್ನು ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟರು.
ಎಂ.ಎಚ್. ಚನ್ನೇಗೌಡ ವಿದ್ಯಾ ಸಂಸ್ಥೆ ಗೌರವಾಧ್ಯಕ್ಷ, ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ. ಚಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ, ನಗರಸಭಾಧ್ಯಕ್ಷೆ ಕೋಕಿಲ ಅರುಣ, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸದಸ್ಯರಾದ ಲತಾ ರಾಮು, ಸರ್ವ ಮಂಗಳ, ನಂದೀಶ, ಚೆನ್ನೇಗೌಡ ವಿದ್ಯಾ ಸಂಸ್ಥೆ ಅಧ್ಯಕ್ಷ ಎಂ.ಸ್ವರೂಪ್ ಚಂದ್, ಕಾರ್ಯದರ್ಶಿ ಅಪೂರ್ವ ಚಂದ್ರ, ನಾಡಪ್ರಭು ಒಕ್ಕಲಿಗರ ಸಂಘದ ಅಧ್ಯಕ್ಷ ದೇಶಹಳ್ಳಿ ಶಿವಪ್ಪ, ಧ್ವನಿ ಲಯನ್ಸ್ ಸಂಸ್ಥೆ ರಜನಿರಾಜ್, ಎಚ್.ಕೆ.ವಿ.ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಪಿ.ಕಿರಣ್, ಜಿ.ಸುರೇಂದ್ರ ಹಾಗೂ ವಿದ್ಯಾ ಸಂಸ್ಥೆ ಬೋಧಕ ಮತ್ತು ಬೋಧಕೆ ತರ ಸಿಬ್ಬಂದಿ ಭಾಗವಹಿಸಿದ್ದರು.ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರ ವಿತರಣೆ
ಮದ್ದೂರು:ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ನಗರಸಭೆ ಸ್ವಚ್ಛ ಭಾರತ್ ಮಿಷನ್ ನ ನಮಸ್ತೆ ಯೋಜನೆಯಡಿ ಒಳಚರಂಡಿ ನಿರ್ವಹಣೆ ಮಾಡುವ ಪೌರಕಾರ್ಮಿಕರಿಗೆ ಗುರುವಾರ ಸುರಕ್ಷತಾ ಪರಿಕರಗಳನ್ನು ಒಳಗೊಂಡ ಕಿಟ್‌ಗಳನ್ನು ವಿತರಿಸಲಾಯಿತು.
ಪಟ್ಟಣದ ನಗರಸಭೆ ಆವರಣದಲ್ಲಿ ಗಾಂಧೀಜಿ ಮತ್ತು ಶಾಸ್ತ್ರಿ ಜಯಂತಿಯಲ್ಲಿ ಪ್ರಭಾರ ಪೌರಾಯುಕ್ತ ಪರಶುರಾಮ್ ಸತ್ತಿಗೇರಿ ಮತ್ತು ನಗರಸಭಾ ಅಧ್ಯಕ್ಷೆ ಕೋಕಿಲ ಅರುಣ್ 8 ಮಂದಿ ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಒಳಗೊಂಡ ಕಿಟ್ ಗಳನ್ನು ವಿತರಿಸಿದರು.ಕಾರ್ಯಕ್ರಮದಲ್ಲಿ ನಗರಸಭಾ ಉಪಾಧ್ಯಕ್ಷ ಟಿ.ಆರ್.ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಮಹೇಶ್, ಲತಾ ರಾಮು, ಸರ್ವ ಮಂಗಳ, ವ್ಯವಸ್ಥಾಪಕ ಶ್ರೀಧರ್, ಪರಿಸರ ಅಭಿಯಂತರೆ ಅರ್ಚನಾ, ಕಂದಾಯ ಅಧಿಕಾರಿ ಪುಟ್ಟಸ್ವಾಮಿ, ಲೆಕ್ಕಾಧಿಕಾರಿ ಚಂದ್ರಕಲಾ ಹಾಗೂ ನಗರಸಭೆ ಸಿಬ್ಬಂದಿ ಭಾಗವಹಿಸಿದ್ದರು.