ಸಾರಾಂಶ
ಚಿಕ್ಕೋಡಿ ಕೆಎಲ್‌ಇ ಸಂಸ್ಥೆಯ ಸಿ.ಬಿ.ಕೋರೆ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಅತಿಥಿ ಆರ್.ವ್ಹಿ.ಕುಲಕರ್ಣಿ ಅವರನ್ನು ಪ್ರಾಚಾರ್ಯ ದರ್ಶನ ಬಿಳ್ಳೂರ ಸ್ವಾಗತಿಸಿದರು.
ಚಿಕ್ಕೋಡಿ: ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿಯನ್ನು ಪಾಲಿಸುತ್ತ, ರೈತರನ್ನು, ಸೈನಿಕರನ್ನು ಹಾಗೂ ಶಿಕ್ಷಕರನ್ನು ಗೌರವಿಸಬೇಕೆಂದು ಆರ್.ವಿ.ಕುಲಕರ್ಣಿ ಹೇಳಿದರು.
ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಸಿ.ಬಿ.ಕೋರೆ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ಅಭಿವೃದ್ಧಿ ಮತ್ತು ಸಂವಹನ ಕೌಶಲ್ಯಗಳು ವಿಷಯದ ಮೇಲೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಿಪ್ಲೋಮಾ ವಿದ್ಯಾಬ್ಯಾಸ ಮುಗಿದ ನಂತರ ವಿದ್ಯಾರ್ಥಿಗಳು ಮಾಡಿದ ಸಾಧನೆಗಳನ್ನು ಉದಾಹರಣೆಗಳೊಂದಿಗೆ ಮತ್ತು ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಮಾರ್ಟ್ ವಿಶ್ಲೇಷನೆ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು ಮತ್ತು ಧೈರ್ಯದಿಂದ ಎಲ್ಲ ಕೆಲಸಗಳನ್ನು ಎದುರಿಸಬೇಕೆಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ದರ್ಶನ್ ಕುಮಾರ್ ಬಿಳ್ಳೂರ್ ವಹಿಸಿದ್ದರು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಎಂ. ಬಿ.ನಾವಿ ಸ್ವಾಗತಿಸಿದರು.