ಸಾರಾಂಶ
ಸಕ್ರೀಯವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನಸಿಕ ಹತೋಟಿಯೊಂದಿಗೆ ದೈಹಿಕವಾಗಿ ಹೆಚ್ಚು ಸದೃಢರಾಗಬೇಕು. ಜೊತೆಗೆ ತೀರ್ಪುಗಾರ ಶಿಕ್ಷಕರು ಸಹ ನಿಷ್ಪಕ್ಷಪಾತವಾಗಿ ತೀರ್ಪು ನೀಡುವ ಮೂಲಕ ಅರ್ಹ ಕ್ರೀಡಾಪಟುಗಳನ್ನು ಉತ್ತೇಜಿಸುವಂತೆ ಮಕ್ಕಳಿಗೆ ಕಿವಿಮಾತು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ವಿದ್ಯಾರ್ಥಿಗಳು ಕ್ರೀಡಾ ಮನೋಭಾವದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸುವ ಜೊತೆಗೆ ತೀರ್ಪುಗಾರರ ತೀರ್ಪಿಗೆ ಗೌರವ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ತಿಳಿಸಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಸಬಾ ಹೋಬಳಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಕ್ರೀಡೆಗೆ ಹೆಚ್ಚಿನ ಗಮನ ನೀಡಬೇಕು ಎಂದರು.
ಸಕ್ರೀಯವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನಸಿಕ ಹತೋಟಿಯೊಂದಿಗೆ ದೈಹಿಕವಾಗಿ ಹೆಚ್ಚು ಸದೃಢರಾಗಬೇಕು. ಜೊತೆಗೆ ತೀರ್ಪುಗಾರ ಶಿಕ್ಷಕರು ಸಹ ನಿಷ್ಪಕ್ಷಪಾತವಾಗಿ ತೀರ್ಪು ನೀಡುವ ಮೂಲಕ ಅರ್ಹ ಕ್ರೀಡಾಪಟುಗಳನ್ನು ಉತ್ತೇಜಿಸುವಂತೆ ಮಕ್ಕಳಿಗೆ ಕಿವಿಮಾತು ಹೇಳಿದರು.ಇದಕ್ಕೂ ಮುನ್ನ 2023 ರಲ್ಲಿ ತಮಿಳುನಾಡಿನಲ್ಲಿ ನಡೆದ ಸಬ್ ಜೂನಿಯರ್ "ಖೇಲೋ ಇಂಡಿಯಾ ಖೋಖೋ " ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಕು.ಲೇಖನ ಅವರಿಂದ ಬಿಇಒ ಮಹೇಶ್ ರವರು ಕ್ರೀಡಾಜ್ಯೋತಿ ಸ್ವೀಕರಿಸಿ ವಿದ್ಯಾರ್ಥಿಗಳಿಂದ ಧ್ವಜ ವಂದನೆ ಸ್ವಿಕರಿಸಿದರು.
ಪಟ್ಟಣದ ನ್ಯೂ ಆಕ್ಸ್ ಫರ್ಡ್ ಶಾಲೆಯು ಕ್ರೀಡಾಕೂಟವನ್ನು ಆಯೋಜಿಸಿದ್ದು, ಕಸಬಾ ಹೋಬಳಿಯ ವಿವಿದ ಶಾಲೆಗಳಿಂದ ನೂರಾರು ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಗಮನ ಸೆಳೆದರು. ಹಿರಿಯ ಮತ್ತು ಕಿರಿಯ ದೈಹಿಕ ಶಿಕ್ಷಕರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.;Resize=(128,128))
;Resize=(128,128))