ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಸೈನಿಕರ ಹೋರಾಟವನ್ನು ಗೌರವಿಸಬೇಕು ಮತ್ತು ತಮ್ಮ ಜೀವನದಲ್ಲಿ ಸ್ವಯಂ ಶಿಸ್ತುನ್ನು ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.ಮಂಗಳೂರು ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ೭೮ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್, ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಪ್ರಜ್ಞೆಯ ಮೂಲಕ ದೇಶ ಸೇವೆಯನ್ನು ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್ ಅವರು ನೂತನವಾಗಿ ಆಯ್ಕೆಯಾದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಬೋಧಿಸುವ ಮೂಲಕ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಶಿಕ್ಷಣ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್. ನಾಯಕ್, ವಾಸ್ತುತಜ್ಞೆ ದೀಪಿಕಾ ಎ. ನಾಯಕ್, ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್ ಇದ್ದರು.ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಏರ್ಪಟ್ಟಿತು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ನವನೀತ್ ಪೈ, ಪ್ರಾಚಿ ನಿರೂಪಿಸಿದರು. ೨೦೨೪-೨೫ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ವೈಷ್ಣವಿ ಪುತ್ರನ್, ಕಾರ್ಯದರ್ಶಿಯಾಗಿ ಥ್ವಿಶಾ ಆರ್ ಆಚಾರ್ಯ, ಉಪಾಧ್ಯಕ್ಷರಾಗಿ ಪೂರಬ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಪ್ರಣೀತಾ ಅವರು ಅಧಿಕಾರ ಸ್ವೀಕರಿಸಿದರು.