ಸಾರಾಂಶ
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಸೋಮವಾರ ಮಳೆ ಬಿಡುವು ನೀಡಿ ಆಗಾಗ್ಗೆ ಸುರಿಯಿತು.
ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣ ಕಂಡುಬಂತು, ಸ್ವಲ್ಪ ಹೊತ್ತು ಬಿಡುವು ನೀಡಿ ಮತ್ತೆ ಸುರಿಯಿತು. ಜಿಲ್ಲೆ ವಿವಿಧ ಕಡೆಯಲ್ಲೂ ಮಳೆಯ ವಾತಾವರಣವಿತ್ತು.ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 22.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 425.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 181.65 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ 33.35 ಮಿ.ಮೀ. ಕಳೆದ ವರ್ಷ ಇದೇ ದಿನ 1.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 606.56 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 268.58 ಮಿ.ಮೀ. ಮಳೆಯಾಗಿತ್ತು.ವಿರಾಜಪೇಟೆ ತಾಲೂಕಿನಲ್ಲಿ 23.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 369.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 122.51 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲೂಕಿನಲ್ಲಿ 15.91 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 395.99 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 142.77 ಮಿ.ಮೀ. ಮಳೆಯಾಗಿತ್ತು.ಸೋಮವಾರಪೇಟೆ ತಾಲೂಕಿನಲ್ಲಿ 20.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 343.95 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 138.11 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲೂಕಿನಲ್ಲಿ19.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 412.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 236.30 ಮಿ.ಮೀ. ಮಳೆಯಾಗಿತ್ತು.ಹೋಬಳಿ ವಿವರ : ಮಡಿಕೇರಿ ಕಸಬಾ 47.20, ನಾಪೋಕ್ಲು 23, ಸಂಪಾಜೆ 29, ಭಾಗಮಂಡಲ 34.20, ವಿರಾಜಪೇಟೆ 24.80, ಅಮ್ಮತ್ತಿ 22.50, ಹುದಿಕೇರಿ 15.20, ಶ್ರೀಮಂಗಲ 17.40, ಪೊನ್ನಂಪೇಟೆ 17, ಬಾಳೆಲೆ 14.04, ಸೋಮವಾರಪೇಟೆ 14.40, ಶನಿವಾರಸಂತೆ 10.40, ಶಾಂತಳ್ಳಿ 38, ಕೊಡ್ಲಿಪೇಟೆ 18.80, ಕುಶಾಲನಗರ 13.60, ಸುಂಟಿಕೊಪ್ಪ 26 ಮಿ.ಮೀ.ಮಳೆಯಾಗಿದೆ.
ಹಾರಂಗಿ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2825.26 ಅಡಿಗಳು. ಕಳೆದ ವರ್ಷ ಇದೇ ದಿನ 2818.91 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 6.20 ಮಿ.ಮೀ., ಇಂದಿನ ನೀರಿನ ಒಳಹರಿವು 490 ಕ್ಯುಸೆಕ್, ಕಳೆದ ವರ್ಷ ಇದೇ ದಿನ 52 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ನಾಲೆಗೆ 30 ಕ್ಯುಸೆಕ್.