ಜನರ ಸಮಸ್ಯೆಗೆ ಸೂಕ್ತ ರೀತಿ ಸ್ಪಂದಿಸಿ: ಡಾ.ಕೆ.ಜಿ.ಕಾಂತರಾಜ್

| Published : Jul 23 2025, 04:25 AM IST

ಸಾರಾಂಶ

ಜನರು ಆಶಾಭಾವನೆಯಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗೆ ಬರುತ್ತಾರೆ. ಅವರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ವರ್ಗಾವಣೆಗೊಂಡ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ತರೀಕೆರೆ

ಜನರು ಆಶಾಭಾವನೆಯಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗೆ ಬರುತ್ತಾರೆ. ಅವರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ವರ್ಗಾವಣೆಗೊಂಡ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿಕ್ಕಮಗಳೂರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತರೀಕೆರೆ ಹಾಗೂ ಅರಿವು ವೇದಿಕೆ ತರೀಕೆರೆ ವತಿಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವರ್ಗಾವಣೆಗೊಂಡ ಉಪ ವಿಬಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್‌ ಅವರಿಗೆ ಮಂಗಳವಾರ ಏರ್ಪಾಡಾಗಿದ್ದ ಅಬಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಹಂತ ಹಂತವಾಗಿ ಗುರಿ ತಲುಪಬೇಕು, ಯಾವುದೋ ಜನ್ಮದ ಪುಣ್ಯ, ಶಾಸಕರಾದ ಜಿ.ಹೆಚ್.ಶ್ರೀನಿವಾಸ್ ಅವರು ಇಲ್ಲಿ ಕರ್ತವ್ಯ ನಿರ್ವಹಿಸಲು ನನಗೆ ಅವಕಾಶ ಮಾಡಿಕೊಟ್ಟರು,. ತರೀಕೆರೆಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಮಾಡಲು ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ನನಗೆ ಸಹಕಾರ ನೀಡಿದರು ಎಂದರು.

ವರ್ಗಾವಣೆಗೊಂಡ ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮಾತನಾಡಿ, ಮನಸ್ಸುಗಳನ್ನು ಒಂದುಗೂಡಿಸಬೇಕು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಜನಪರ ಕಾಳಜಿ ಹೊಂದಿದ್ದು, ಎಲ್ಲ ಸಂಘ ಸಂಸ್ಥೆಗಳ ಸಹಕಾರದಿಂದ ಅನೇಕ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದೆ, ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅವರು ಸರಳ ವ್ಯಕ್ತಿತ್ತವದ ಅಧಿಕಾರಿ, ಶಾಸಕರಾದ ಜೆ.ಹೆಚ್.ಶ್ರೀನಿವಾಸ್ ಮತ್ತು ಪುರಸಭೆ ಸರ್ವ ಸದಸ್ಯರ ಸಹಕಾರದಿಂದ ಅನೇಕ ಅಭಿವೃದ್ದಿ ಕಾರ್ಯಗಳನ್ನು ನಿರ್ವಹಿಸಲಾಯಿತು ಎಂದರು.

ಅರಿವು ವೇದಿಕೆ ಅಧ್ಯಕ್ಷ ಕೆ.ಎಸ್.ಶಿವಣ್ಣ, ಡಾ.ಕೆ.ಜಿ.ಕಾಂತರಾಜ್, ಮತ್ತು ಎಚ್.ಪ್ರಶಾಂತ್ ಅವರು ತರೀಕೆರೆ

ಅಭಿವೃದ್ದಿಗೆ ಆಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರು ಸೂರಿ ಶ್ರೀನಿವಾಸ್ ಮಾತನಾಡಿ, ಡಾ.ಕೆ.ಜಿ.ಕಾಂತರಾಜ್ ಮತ್ತು ಹೆಚ್.ಪ್ರಶಾಂತ್ ಅವರು ಸರಳತೆಯಿಂದಾಗಿ ಎಲ್ಲರ ಹೃದಯದಲ್ಲಿ ಶಾಶ್ವತವಾಗಿರುತ್ತಾರೆ ಎಂದು ಹೇಳಿದರು.

ಮಾಜಿ ಪುರಸಭಾಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಮಾಜಿ ಪುರಸಭಾಧ್ಯಕ್ಷ ಎಂ.ನರೇಂದ್ರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ, ಅರಿವು ವೇದಿಕೆ ಅಧ್ಯಕ್ಷ ಕೆ.ಎಸ್.ಶಿವಣ್ಣ, ಕನ್ನಡಶ್ರೀ ಬಿ.ಎಸ್.ಭಗವಾನ್, ಪುರಸಭೆ ಸದಸ್ಯ ಟಿ.ದಾದಾಪೀರ್, ಸಾಹಿತಿ ಮನಸುಳಿ ಮೋಹನ್, ಡಾ.ಟಿ.ಎನ್.ಜಗದೀಶ್, ಮಿಲ್ಟ್ರಿ ಶ್ರೀನಿವಾಸ್, ಜಿಲ್ಲಾ ಸಮ್ಮೇಳನಾಧ್ಯಕ್ಷರು ಡಾ.ಮರುಳಸಿದ್ದಯ್ಯ ಪಟೇಲ್, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್, ಕಸಾಪ ನಿಕಟಪೂರ್ವ ಅಧ್ಯಕ್ಷ ನವೀನ್ ಪೆನ್ನಯ್ಯ, ಜಿ.ಸುಬ್ರಹ್ಮಣ್ಯ,,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್.ಅನಂತಪ್ಪ, ಪುಟ್ಟಸ್ವಾಮಿ, ತಾಪಂ ಇಒ ಡಾ.ದೇವೇಂದ್ರಪ್ಪ, ಚೇತನ್ ಗೌಡ, ಲಕ್ಷ್ಮಿ ಭಗವಾನ್, ಸದ್ವಿದ್ಯಾ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯಿನಿ ಹರ್ಷಿಣಿ, ಕಸಾಪ ಪದಾದಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.