ಸಾರ್ವಜನಿಕರು ತಮ್ಮ ತಮ್ಮ ನಿತ್ಯದ ಕೆಲಸಗಳಿಗೆ ಅಲೆಸದೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿ ಅರಿತು ಅವರ ಅಹವಾಲುಗಳಿಗೆ ಸ್ಪಂದಿಸಿ ಇತ್ಯರ್ಥಪಡಿಸುವಲ್ಲಿ ಜವಾಬ್ದಾರಿ ಅರಿತು ಕೆಲಸ ಮಾಡಿ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ಸಾರ್ವಜನಿಕರು ತಮ್ಮ ತಮ್ಮ ನಿತ್ಯದ ಕೆಲಸಗಳಿಗೆ ಅಲೆಸದೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿ ಅರಿತು ಅವರ ಅಹವಾಲುಗಳಿಗೆ ಸ್ಪಂದಿಸಿ ಇತ್ಯರ್ಥಪಡಿಸುವಲ್ಲಿ ಜವಾಬ್ದಾರಿ ಅರಿತು ಕೆಲಸ ಮಾಡಿ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು

ತಾಲೂಕು ಆಡಳಿತ, ತಾಲೂಕು ಪಂಚಾಯತ್ ವತಿಯಿಂದ ಶನಿವಾರ ಪಾಳ್ಯ ಗ್ರಾಮದಲ್ಲಿ ಅಯೋಜಿಸಲಾಗಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರವೇ ಜನರ ಮನೆಬಾಗಿಲಿಗೆ ಬಂದಿರುವಂತೆ ಇಡೀ ತಾಲೂಕು ಮಟ್ಟದ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಅವಕಾಶ ಕಲ್ಪಿಸಲಾಗಿದೆ.ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರವು ಪ್ರಜಾಸೇವೆ ಆಂದೋಲನ ಸಭೆ ರೂಪಿಸಿದ್ದು ಜನತೆ ಇದರ ಸದ್ಬಳಕೆಗೆ ಮುಂದಾಗಬೇಕು ಎಂದರು.

ಸರ್ಕಾರಿ ಕೆಲಸಗಳಿಗೆ ಕಚೇರಿಗಳಿಗೆ ಹಲವು ಬಾರಿ ಅಲೆದಾಡಿದರೂ ಪರಿಹಾರ ದೊರೆಯದ ಸಮಸ್ಯೆಗಳನ್ನು ಸಾರ್ವಜನಿಕರು ಇಲ್ಲಿ ಅಧಿಕಾರಿಗಳ ಗಮನಕ್ಕೆ ತರಬಹುದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸುವುದು ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದೇ ಪ್ರಜಾಸೇವೆ ಆಂದೋಲ ಸಭೆಯ ಉದ್ದೇಶ. ಜನರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಸಲ್ಲಿಸಿದರೆ ಅವುಗಳಿಗೆ ಪರಿಹಾರ ದೊರಕಿಸಲು ಮೂಲ ಉದ್ದೇಶ, ಸರ್ಕಾರ ಸಾಕಷ್ಟು ಜನ ಸ್ಪಂದನಾ ವಿಚಾರದಲ್ಲಿ ಸ್ಪಂದನೆಗಾಗಿ ಈಕಾರ್ಯಕ್ರಮರೂಪಿಸಿದ್ದು ಅಧಿಕಾರಿಗಳು ಇದರ ಯಶಸ್ವಿಗೆ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿ ತಾವೂ ಸಹ ನಾಗರೀಕರ ಸಮಸ್ಯೆಗೆ ಸಹಕರಿಸುವುದಾಗಿ ಇದೆ ವೇಳೆ ಭರವಸೆ ನೀಡಿದ ಶಾಸಕರು.ಈ ರೀತಿಯ ಜನಪರ ಕಾರ್ಯಕ್ರಮಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತಿರಬೇಕು. ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅರ್ಹರಿಗೆ ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ತಾಲೂಕು ಮಟ್ಟದ ಅಧಿಕಾರಿಗಳು ಜನರ ಕೆಲಸಗಳನ್ನು ಮಾಡಿಕೊಡಲು ಇಲ್ಲಿಗೆ ಬಂದಿದ್ದು, ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೂ ಮುನ್ನ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು ಕೌಂಟರ್‌ಗಳಲ್ಲಿ ನೋಂದಣಿ ಮಾಡಿಕೊಂಡು ಲಿಖಿತವಾಗಿ ಅಹವಾಲು ಅರ್ಜಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದು ಪರಿಹರಿಸಿಕೊಂಡರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರೆತರೆ ಇನ್ನೂ ಕೆಲ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹನೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಚಪ್ಪ, ಉಪವಿಭಾಗಾಧಿಕಾರಿ ಸುಬ್ರಮಣ್ಯ, ತಹಸೀಲ್ದಾರ್ ರಮೇಶ್, ತಾ.ಪಂ ಇಒ ಕುಮಾರ್, ಹನೂರು ಮಂಜೇಶ್, ನಾಗೇಂದ್ರಬಾಬು ಇತರರು ಹಾಜರಿದ್ದರು.