ಶೃಂಗೇರಿ ಸುಳ್ಳು ಸಬೂಬು ಹೇಳದೆ ಕಚೇರಿಗಳಿಗೆ ಬರುವ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಸಲಹೆ ನೀಡಿದರು.
ತಾಪಂ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಸಲಹೆ
ಕನ್ನಡಪ್ರಭ ವಾರ್ತೆ ಶೃಂಗೇರಿಸುಳ್ಳು ಸಬೂಬು ಹೇಳದೆ ಕಚೇರಿಗಳಿಗೆ ಬರುವ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಸಲಹೆ ನೀಡಿದರು.
ಪಟ್ಟಣದ ತಾಪಂನಲ್ಲಿ ಶುಕ್ರವಾರ ನಡೆದ ಕೆಡಿಪಿ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ತಾಲೂಕಿನಲ್ಲಿ ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಜಾನುವಾರುಗಳು ಅಲ್ಲಲ್ಲಿ ಇರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಜಾನುವಾರುಗಳು ಸಾಯುತ್ತಿವೆ. ಕ್ರಮ ಕೈಗೊಳ್ಳಬೇಕು ಎಂದು ಕೆಡಿಪಿ ಸದಸ್ಯರು ಒತ್ತಾಯಿಸಿದಾಗ ಉತ್ತರಿಸಿದ ಶಾಸಕರು ಪಶು ಇಲಾಖೆ ವೈದ್ಯಾಧಿಕಾರಿಗಳು ಈ ಬಗ್ಗೆ ಪ್ರಕಟಣೆ ಹೊರಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಎಂದರು.ತಾಲೂಕಿನಲ್ಲಿರುವ ಮೀನುಗಾರರ ಕುಟುಂಬಗಳನ್ನು ಗುರುತಿಸಿ ಅವರಿಗೆ ಮನೆ ಇದೆಯೇ, ಸೌಲಭ್ಯಗಳಿದೆಯೇ ಎಂಬುದನ್ನು ಪರಿಶೀಲಿಸಬೇಕು. ಮೀನು ಹಿಡಿಯುವವರಿಗೆ ಲೈಸೆನ್ಸ್ ನೀಡಬೇಕು ಎಂದು ತಿಳಿಸಿದರು.
ತಾಲೂಕಿನ ಎಂಎಸ್ ಐಲ್ ಗಳ ಬಳಿ ತ್ಯಾಜ್ಯಗಳು ಸಂಗ್ರಹವಾಗುತ್ತಿರುವ ಬಗ್ಗೆ ದೂರು ಬರುತ್ತಿದ್ದು ಅಬಕಾರಿ ಇಲಾಖೆ, ಪೋಲೀಸ್ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ದಿನಸಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಗಳ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಆರೋಪ ಬರುತ್ತಿದ್ದು ಸರಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಕಂದಾಯ,ಅರಣ್ಯ,ಮೆಸ್ಕಾಂ,ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಿತು.ಸಭೆಯಲ್ಲಿ ಜಿಪಂ ಮುಖ್ಯಲೆಕ್ಕಾದಿಕಾರಿ ನರೇಂದ್ರ ಕುಮಾರ್, ತಹಸೀಲ್ದಾರ್ ಅನೂಪ್ ಸಂಜೋಗ್, ತಾಪಂ ಕಾರ್ಯನಿರ್ವಾಹಣಾಧಿಕಾರಿ ಸುದೀಪ್ ಮತ್ತಿತರರು ಇದ್ದರು.
16 ಶ್ರೀ ಚಿತ್ರ 6-ಶೃಂಗೇರಿ ತಾಪಂನಲ್ಲಿ ಶಾಸಕ ಟಿ.ಡಿ.ರಾಜೇಗೌಡ ಅಧ್ಯಕ್ಷತೆಯಲ್ಲಿ ಶುಕ್ರವಾರ ಕೆಡಿಪಿ ತ್ರೈಮಾಸಿಕ ಸಭೆ ನಡೆಯಿತು.