ಜನರ ಸಮಸ್ಯೆಗೆ ಸ್ಪಂದಿಸಿ: ಸಚಿವ ಪ್ರಿಯಾಂಕ್‌ ಖರ್ಗೆ

| Published : Feb 12 2024, 01:33 AM IST

ಸಾರಾಂಶ

ಕ್ಷೇತ್ರದ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಯದರ ಜೊತೆ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಲ್ಲಿ ಸದಾ ಕಾರ್ಯೋನ್ಮುಖನಾಗಿರುತ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ತಮ್ಮಲ್ಲಿ ಬಂದಲ್ಲಿ ಅವರ ಕೆಲಸಗಳನ್ನು ವಿಳಂಬ ಮಾಡದೇ ಪರಿಹಾರವನ್ನು ನೀಡಬೇಕು ಎಂದು ಗ್ರಾಮೀಣಾಭಿವೃದ್ದಿ ಪಂಚಾಯ್ತಿ ರಾಜ ಸಚಿವ ಪ್ರಿಯಾಂಕ್ ಖರ್ಗೆ ಅವರು ತಾಲೂಕಿನ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯ್ತಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಗೆ ಅಹವಾಲುಗಳನ್ನು ಸ್ವಿಕರಿಸಿ ಬಂದ ದೂರುಗಳಿಗೆ ಸ್ಪಂದಿಸಿದ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನನ್ನ ಮೊದಲ ಆಧ್ಯತೆಯಾಗಿದೆ. ಕ್ಷೇತ್ರದ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಯದರ ಜೊತೆ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಲ್ಲಿ ಸದಾ ಕಾರ್ಯೋನ್ಮುಖನಾಗಿರುತ್ತೇನೆ. ಇವೆಲ್ಲ ನನ್ನೊಬ್ಬನಿಂದ ಸಾಧ್ಯವಿಲ್ಲ. ಅದಕ್ಕೆ ತಾಲೂಕು ಅಧಿಕಾರಿಗಳ ಸಹಾಯ ಸಹಕಾರ ಅಗತ್ಯವಾಗಿದೆ ಹಾಗಾಗಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಕರೆನೀಡಿದರು.

ತಹಸೀಲ್ದಾರ ಸೈಯದ ಷಾಷವಲ್ಲಿ, ಇಓ ನೀಲಗಂಗಾ, ಡಿವೈಎಸ್‌ಪಿ ಶಂಕರಗೌಡ ಪಾಟೀಲ್, ಸಿಪಿಐ ಚಂದ್ರಶೇಖರ ತಿಗಡಿ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ ಸೇರಿದಂತೆ ತಾಲೂಕು ಅಧಿಕಾರಿಗಳು ಮುಖಂಡರು ಸಾರ್ವಜನಿಕರು ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಇದ್ದರು.