ಸಾರಾಂಶ
-ನಗರದ ಸ್ವಚ್ಚತೆಗಾಗಿ ಶ್ರಮಿಸುವ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ
------ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಬೀದಿಗಳಿದು ತಮ್ಮ ಪಾಲಿನ ಕರ್ತವ್ಯ ಪ್ರಾಮಾಣಿಕವಾಗಿ ಮಾಡುವ ಮೂಲಕ ಪೌರಕಾರ್ಮಿಕರು ಜನಸಾಮಾನ್ಯರ ವಿಶ್ವಾಸವನ್ನು ಗಳಿಸಿದ್ದಾರೆ. ಪೌರಕಾರ್ಮಿಕರ ಪರಿಶ್ರಮದಿಂದ ನಮ್ಮ ಆರೋಗ್ಯ ರಕ್ಷಣೆಯಾಗುತ್ತದೆ. ಪೌರಕಾರ್ಮಿಕರಿಗೆ ಜನರ ಪರವಾಗಿ ತುಂಬು ಹೃದಯದ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.ಅವರು, ನಗರಸಭೆ ಆವರಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಪೌರಕಾರ್ಮಿಕರಿಗೆ ಸರ್ಕಾರದಿಂದ ಸೂಕ್ತ ಸೌಲಭ್ಯ ಸಿಗದೇ ಇದ್ದರೂ ಜನರ ಸೇವೆ ಮಾಡುವಲ್ಲಿ ಎಂದೂ ಹಿಂದೆ ಬಿದಿದ್ದಲ್ಲ. ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ಧಾರೆ. ಅವರ ಮನವಿಯಲ್ಲಿ ಕಷ್ಟಗಳ ಬಗ್ಗೆ ನಿವೇದನೆ ಮಾಡಿಕೊಂಡಿದ್ಧಾರೆ, ಸರ್ಕಾರ ಈ ಬಗ್ಗೆ ಹೆಚ್ಚು ಗಮನನೀಡಿ ಪೌರಕಾರ್ಮಿಕರ ಸಮಸ್ಯೆಗಳನ್ನು ನಿವಾರಣೆ ಮಾಡಬೇಕಿದೆ.
ಹೊರಗುತ್ತಿಗೆದಾರರ ಬದುಕಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಬೇಕಿದೆ, ಪೌರಕಾರ್ಮಿಕರ ಸಮಸ್ಯೆಗಳಿಗೆ ಬೆನ್ನೆಲುಬಾಗಿ ಸ್ಪಂದಿಸುವೆ ಎಂದರು.ಪೌರಾಯುಕ್ತ ಎಚ್.ಜಿ.ಜಗರೆಡ್ಡಿ, ನಗರಸಭೆ ಸಹ ಪೌರಕಾರ್ಮಿಕರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುತ್ತಾ ಬಂದಿದೆ. ಸರ್ಕಾರದ ಸೂಚನೆಗಳ ಅನ್ವಯ ಅವರಿಗೆ ಸವಲತ್ತುಗಳನ್ನು ನೀಡಲಾಗುತ್ತಿದೆ. ನಗರಸಭೆಯಲ್ಲಿ ಒಟ್ಟು ೯೩ ಪೌರಕಾರ್ಮಿಕರಿದ್ದು, ದಿನಾಚರಣೆ ಹಿನ್ನೆಲೆಯಲ್ಲಿ ಅವರಿಗೆ ನೆನಪಿನ ಕಾಣಿಕೆ ನೀಡಲಾಗುವುದು ಎಂದರು.
ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸರ್ಕಾರ ಹೆಚ್ಚು ಸ್ಪಂದಿಸಬೇಕೆಂದು ಮಾಜಿ ಉಪಾಧ್ಯಕ್ಷ ಟಿ.ವಿಜಯಕುಮಾರ್ ಆಗ್ರಹಪಡಿಸಿದರು. ನಗರಸಭಾ ಸದಸ್ಯರಾದ ಕೆ.ವೀರಭದ್ರಪ್ಪ, ಜಯಲಕಷ್ಮೀ ಕೃಷ್ಣಮೂರ್ತಿ, ನಾಮಿನಿ ಸದಸ್ಯ ಡಿ.ಕೆ.ಅನ್ವರ್‌ಮಾಸ್ಟರ್, ಆರ್.ವೀರಭದ್ರಪ್ಪ ಮಾತನಾಡಿದರು.ನಗರಸಭೆ ಅಧ್ಯಕ್ಷೆ ಜೈತುಂಬಿ, ಪೌರಕಾರ್ಮಿಕರ ಸಂಕಷ್ಟ ನಿವಾರಣೆಗೆ ನಗರಸಭೆ ಆಡಳಿತ ಬದ್ದವಾಗಿದೆ ಎಂದರು. ಉಪಾಧ್ಯಕ್ಷೆ ಸುಜಾತ, ನಗರಸಭೆ ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ವೆಂಕಟೇಶ್, ಸುಮಭರಮಣ್ಣ, ಬಡಗಿಪಾಪಣ್ಣ, ಜಗದೀಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಎಇಇ ಕೆ.ವಿನಯ್, ನರೇಂದ್ರಬಾಬು, ಲೋಕೇಶ್, ವ್ಯವಸ್ಥಾಪಕ ಲಿಂಗರಾಜು, ಕಂದಾಯಾಧಿಕಾರಿ ಸತೀಶ್, ಆರೋಗ್ಯ ನಿರೀಕ್ಷಕರಾದ ಗಣೇಶ್, ಗೀತಾಕುಮಾರಿ, ಸುನೀಲ್, ರುದ್ರಮುನಿ, ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಸ್.ಶ್ರೀನಿವಾಸ್, ಉಪಾಧ್ಯಕ್ಷ ಪೆನ್ನೇಶ್ ಮುಂತಾದವರು ಉಪಸ್ಥಿತರಿದ್ದರು.
-----ಪೋಟೋ೨೩ಸಿಎಲ್‌ಕೆ೨
ಚಳ್ಳಕೆರೆ ನಗರದ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.