ನಗರದ ಐತಿಹಾಸಿಕ ಬಹಮನಿ ಕೋಟೆ ಎದುರು ನಡೆಯುತ್ತಿರುವ ಹಿಂದೂ ಮಹಾಗಣಪತಿ ಸಮಿತಿಯ 21 ದಿನಗಳ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಅ. 1 ರಂದು ಪಾಲ್ಗೊಂಡು ವಿಶೇಷ ಉಪನ್ಯಾಸ ನೀಡಬೇಕಿದ್ದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರ ಕಲಬುರಗಿ ನಗರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಕನ್ನಡಪ್ರಭ ವಾರ್ತೆ ಕಲಬುರಗಿನಗರದ ಐತಿಹಾಸಿಕ ಬಹಮನಿ ಕೋಟೆ ಎದುರು ನಡೆಯುತ್ತಿರುವ ಹಿಂದೂ ಮಹಾಗಣಪತಿ ಸಮಿತಿಯ 21 ದಿನಗಳ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಅ. 1 ರಂದು ಪಾಲ್ಗೊಂಡು ವಿಶೇಷ ಉಪನ್ಯಾಸ ನೀಡಬೇಕಿದ್ದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರ ಕಲಬುರಗಿ ನಗರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.ಸೆ.30ರಿಂದ ಅ. 4ರವರೆಗೆ ನಗರ ಪ್ರವೇಶಿಸದಂತೆ ಕಲಬುರಗಿ ಉಪ ಪೊಲೀಸ್ ಆಯುಕ್ತ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅ.1ರಂದು ನಡೆಯಲಿದ್ದ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಬೇಕಿತ್ತು. ಆದರೆ ನಗರದಲ್ಲಿ ಗಣೇಶೋತ್ಸವ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಕಲಬುರಗಿ ನಗರದ ಕೋಟೆ ಎದುರುಗಡೆ ರಾಜು ನವಲದಿ ಅವರ ಅಧ್ಯಕ್ಷತೆಯಲ್ಲಿ ಹಿಂದೂ ಮಹಾಗಣಪತಿ ಸಮಿತಿಯು ಅ.4ರ ರವರೆಗೆ ಗಣೇಶೋತ್ಸವ ಆಯೋಜಿಸಿದೆ. ಈ ಕಾರ್ಯಕ್ರಮದ ಅಂಗವಾಗಿ ಅ.1 ರಂದು ನಡೆಯಲಿರುವ ಸಮಾರಂಭಕ್ಕೆ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಮುಖ್ಯ ಭಾಷಣಕಾರರನ್ನಾಗಿ ಆಹ್ವಾನಿಸಲಾಗಿತ್ತು.ಈ ಕುರಿತು ಚೌಕ್ ಪೊಲೀಸ್ ಠಾಣೆ ಹಾಗೂ ಎಸಿಪಿ ನಾರ್ತ್ ಉಪ-ವಿಭಾಗದ ಪೊಲೀಸರು ಸಲ್ಲಿಸಿದ ವರದಿಯ ಅನ್ವಯ, ಈ ಹಿಂದೆ ಶ್ರೀಕಾಂತ್ ಶೆಟ್ಟಿ ಅವರು ರಾಜ್ಯದ ವಿವಿಧೆಡೆ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದ ನಿದರ್ಶನಗಳಿವೆ ಎಂದು ಉಲ್ಲೇಖಿಸಲಾಗಿದೆ. 2023ರ ನ. 23 ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ "ಬಿ " ರೌಡಿ ಶೀಟ್ ತೆರೆಯಲಾಗಿದ್ದು, ಅದು ಪ್ರಸ್ತುತ ಚಾಲ್ತಿಯಲ್ಲಿದೆ. ಈ ಹಿಂದೆ ನಡೆದ ಕೆಲವು ಘಟನೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಗಣೇಶೋತ್ಸವ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾನೂನು, ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಇಲಾಖೆಯ ವರದಿಯ ಆಧಾರದ ಮೇಲೆ ಶ್ರೀಕಾಂತ ಶೆಟ್ಟಿ ಕಲಬುರಗಿ ನಗರ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.---ಫೋಟೊ-----ಫೋಟೋ- ಶ್ರೀಕಾಂತ ಶೆಟ್ಟಿ