ಯುವನಿಧಿ ಯೋಜನೆ ಲಾಭ ಅನರ್ಹರು ಪಡೆಯುವುದಕ್ಕೆ ಕಡಿವಾಣ: ಸಿ.ಎಸ್.ಚಂದ್ರಭೂಪಾಲ

| Published : Jun 01 2025, 01:47 AM IST

ಯುವನಿಧಿ ಯೋಜನೆ ಲಾಭ ಅನರ್ಹರು ಪಡೆಯುವುದಕ್ಕೆ ಕಡಿವಾಣ: ಸಿ.ಎಸ್.ಚಂದ್ರಭೂಪಾಲ
Share this Article
  • FB
  • TW
  • Linkdin
  • Email

ಸಾರಾಂಶ

ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ 2024 - 25 ನೇ ಸಾಲಿನ ಯುವನಿಧಿ ಯೋಜನೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಈ ಸಭೆಯಲ್ಲಿ ಸದಸ್ಯರು ಮಂಡಿಸಿದ ಅಭಿಪ್ರಾಯ ಕ್ರೂಡೀಕರಿಸಿ ಈ ನಿರ್ಣಯವನ್ನು ಅಂಗೀಕರಿಸಿ, ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಲ್ಲಿ ಅನರ್ಹರು ಫಲಾನುಭವಿಗಳಾಗಿದ್ದು, ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಮಾಡಲಾಯಿತು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ 6460 ಪದವೀದರರು ಮತ್ತು 110 ಡಿಪ್ಲೋಮಾ ಪಡೆದಿದ್ದವರು ಯುವನಿಧಿ ಯೋಜನೆಯಲ್ಲಿ ಫಲಾನುಭವಿಗಳಾಗಿ ನೋಂದಣಿಯಾಗಿದ್ದು, ಈ ಯೋಜನೆಯಿಂದ ಪ್ರತಿ ತಿಂಗಳು 1,79,95,500 ರು. ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ಆದರೆ ಈ ಯೋಜನೆಯಡಿ ನೋಂದಣಿಯಾಗಿದ್ದ ಬಹಳಷ್ಟು ಫಲಾನುಭವಿ ಯುವಕರು ಉದ್ಯೋಗದಲ್ಲಿ ಇದ್ದು ಸಂಬಳ ಪಡೆಯುತ್ತಿದ್ದು, ಸುಳ್ಳು ಮಾಹಿತಿಯನ್ನು ನೀಡಿ ನಿರುದ್ಯೋಗಿಗಳೆಂದು ಸ್ವಯಂ ಘೋಷಣೆ ಮಾಡಿಕೊಂಡು ಯುವನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ರಾಜ್ಯ ಮಟ್ಟದಲ್ಲಿ ತನಿಖೆ ನಡೆಸಿ ನೈಜ ನಿರುದ್ಯೋಗಿ ಫಲಾನುಭವಿಗಳು ಮಾತ್ರವೇ ಯುವನಿಧಿ ಲಾಭ ಪಡೆಯಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.