ಸಾರಾಂಶ
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಆಡಳಿತ ವ್ಯವಸ್ಥೆಯನ್ನು ಪುನರ್ ರಚನೆ ಮಾಡುವ ಅಗತ್ಯವಿದೆ ಎಂದು ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಆಡಳಿತ ವ್ಯವಸ್ಥೆಯನ್ನು ಪುನರ್ ರಚನೆ ಮಾಡುವ ಅಗತ್ಯವಿದೆ ಎಂದು ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎಸ್‌ಸಿ ಮಾದರಿಯಲ್ಲಿ ಕಾಲಮಿತಿಯನ್ನು ಅಳವಡಿಸಿಕೊಳ್ಳಬೇಕು. ಪಿ.ಸಿ. ಹೋಟಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು. ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಮರುಪರೀಕ್ಷೆ ದಿನಾಂಕವನ್ನು ಕೂಡಲೇ ಘೋಷಿಸಿ, ನಿಗದಿತ ಸಮಯದಲ್ಲಿ ಪರೀಕ್ಷೆ ನಡೆಯುವಂತೆ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷೆಯ ಅಧ್ವಾನಕ್ಕೆ ಕಾರಣವಾಗಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದರು.
2023-24ನೇ ಸಾಲಿನಲ್ಲಿ ಕೆಪಿಎಸ್‌ಸಿ 11 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು, ಪ್ರತಿ ಅರ್ಜಿಗೆ 300 ರೂಪಾಯಿ ಶುಲ್ಕ ಪಡೆದಿದೆ. ಇದರಿಂದ ₹33 ಕೋಟಿ ಆದಾಯ ಬಂದಿದೆ. ಈ ಹಣವನ್ನು ಎಲ್ಲಿ ಬಳಸಲಾಗುತ್ತಿದೆ ಎಂಬುದರ ಕುರಿತು ಪರಿಶೀಲನೆ ಮಾಡಬೇಕೆಂದು ಆಗ್ರಹಿಸಿದರು.