ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲು ಸೇವೆ ಪುನಾರಂಭ

| Published : Nov 27 2023, 01:15 AM IST

ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲು ಸೇವೆ ಪುನಾರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿ- ಬೆಂಗಳೂರು- ಹುಬ್ಬಳ್ಳಿ ಸೂಪರ್ ಫಾಸ್ಟ್ ವಿಶೇಷ ರೈಲು (07339/07340) ಸಂಚಾರ ಸೇವೆ ನ. 30ರಿಂದ ಮತ್ತೆ ಪುನಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಹುಬ್ಬಳ್ಳಿ- ಬೆಂಗಳೂರು- ಹುಬ್ಬಳ್ಳಿ ಸೂಪರ್ ಫಾಸ್ಟ್ ವಿಶೇಷ ರೈಲು (07339/07340) ಸಂಚಾರ ಸೇವೆ ನ. 30ರಿಂದ ಮತ್ತೆ ಪುನಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.

ಪ್ರಯಾಣಿಕರ ಕೊರತೆಯಿಂದ ರೈಲ್ವೆ ಇಲಾಖೆ ಈ ರೈಲನ್ನು ರದ್ದುಪಡಿಸಿದಾಗ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಆಕ್ಷೇಪಗಳು ಬಂದಿದ್ದವು. ಈ ರೈಲನ್ನು ಪುನರಾಂಭಿಸಲು ಒತ್ತಡ ಕೇಳಿ ಬಂದಿತ್ತು.

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಈ ಭಾಗದ ಪ್ರಯಾಣಿಕರಿಗೆ ಆಗುವ ಅನಾನುಕೂಲತೆ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ನೈರುತ್ಯ ರೈಲ್ವೆ ಮಹಾ ಪ್ರಬಂಧಕ ಸಂಜೀವ ಕಿಶೋರ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಈ ರೈಲು ಪುನರಾರಂಭದ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಟ್ಟಿದ್ದರು. ಇದರ ಫಲವಾಗಿ ನೈರುತ್ಯ ರೈಲ್ವೆ ಆಡಳಿತ ಈ ರೈಲು ಸೇವೆಯನ್ನು ನ. 30ರಿಂದ 2024ರ ಮಾರ್ಚ್‌ 1ವರೆಗೆ ಮುಂದುವರಿಸಿ ಆದೇಶ ಹೊರಡಿಸಿದೆ.

ಈ ವಿಷಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟ್ವೀಟ್‌ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿ, ರೈಲ್ವೆ ಸಚಿವ ವೈಷ್ಣವಿ ಅಶ್ವಿನಿ ಹಾಗೂ ಇಲಾಖೆಯ ಅಧಿಕಾರಿ ವರ್ಗಕ್ಕೆ ಧನ್ಯವಾದ ತಿಳಿಸಿದ್ದಾರೆ.26ಎಚ್‌ಯುಬಿ32: ಪ್ರಹ್ಲಾದ ಜೋಶಿ