ಸಾರಾಂಶ
ಪ್ರೊ.ಎಂ. ಮಾದಯ್ಯ ಅವರು ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ಮೈಸೂರು ವಿವಿ ಅರ್ಥಶಾಸ್ತ್ರದ ವಿಭಾಗದ ಮುಖ್ಯಸ್ಥರಾಗಿ, ಮೈಸೂರು ವಿವಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ
-
----ಕನ್ನಡಪ್ರಭ ವಾರ್ತೆ ಮೈಸೂರು
ಪ್ರೊ.ಎಂ. ಮಾದಯ್ಯ ಅವರು ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಸ್ನಾತಕೋತ್ತರ ಶಾಖೆಗಳನ್ನು ಪ್ರಾರಂಭಿಸುವ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಿದ್ದರು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಜಿ. ಹೇಮಂತಕುಮಾರ್ ತಿಳಿಸಿದರು.ನಗರದ ಶ್ರೀ ನಟರಾಜ ಶಿಕ್ಷಣ ಸಂಸ್ಥೆಗಳು ಹೊಸಮಠದ ಶ್ರೀ ನಟರಾಜ ಸಭಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಮೈಸೂರು ವಿವಿ ವಿಶ್ರಾಂತ ಕುಲಪತಿ ಹಾಗೂ ಅರ್ಥಶಾಸ್ತ್ರಜ್ಞ ಪ್ರೊ.ಎಂ. ಮಾದಯ್ಯ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಪ್ರೊ.ಎಂ. ಮಾದಯ್ಯ ಅವರು ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ಮೈಸೂರು ವಿವಿ ಅರ್ಥಶಾಸ್ತ್ರದ ವಿಭಾಗದ ಮುಖ್ಯಸ್ಥರಾಗಿ, ಮೈಸೂರು ವಿವಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದರು.
ಸದಾ ವಿದ್ಯಾರ್ಥಿಗಳೊಂದಿಗೆ ಅತ್ಯುತ್ತಮ ಬಾಂಧವ್ಯವನ್ನು ಹೊಂದಿದ್ದರು. ಅವರಿಂದ ಪ್ರವಚನ ಕಲಿತ ಸಾವಿರಾರು ಶಿಷ್ಯಂದಿರು ಅವರ ಬಗ್ಗೆ ಅಪಾರ ಪ್ರೀತಿ, ಗೌರವ ಹೊಂದಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ನಗುತ್ತಲೇ ಸರಳ ಭಾಷೆಯಿಂದ ಪಾಠ ಮಾಡುತ್ತಿದ್ದರು. ದೇಶ, ವಿದೇಶಗಳ ಅರ್ಥಿಕ ಸ್ಥಿತಿ ಗತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುತ್ತಿದ್ದರು ಎಂದು ಅವರು ಹೇಳಿದರು.ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ, ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ, ನಿವೃತ್ತ ಪ್ರಾಧ್ಯಾಪಕರಾದ ಡಾ.ಸಿ.ಪಿ. ಸಿದ್ಧಾಶ್ರಮ, ಪ್ರೊ.ಕೆ.ವೈ. ಯಶೋಧರ, ಪ್ರೊ.ಸಿ. ನಾಗಣ್ಣ, ಪ್ರೊ.ಕೆ.ಎನ್. ಗಂಗಾ ನಾಯಕ್ ಮೊದಲಾದವರು ಇದ್ದರು.