ಸಾರಾಂಶ
ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರಗೌಡ ಸಂಗನಗೌಡ ಪಾಟೀಲ (86) ಮಂಗಳವಾರ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ರೋಣ: ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರಗೌಡ ಸಂಗನಗೌಡ ಪಾಟೀಲ (86) ಮಂಗಳವಾರ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ರೋಣ ಪಟ್ಟಣದ ಪ್ರತಿಷ್ಠಿತ ಪಾಟೀಲ ಮನೆತನದವರಾಗಿದ್ದ ಡಾ. ಈಶ್ವರಗೌಡ. ಎಸ್. ಪಾಟೀಲರು ರಾಯಚೂರ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ರಾಯಚೂರಿನಲ್ಲಿಯೇ ವಾಸವಾಗಿದ್ದರು. ವಯೋ ಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯಲು ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾದರು.ಮೃತರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ಹಿರಿಯ ಸಹೋದರ ಬಾಗಲಕೋಟೆ ಮಾಜಿ ಸಂಸದ ಆರ್.ಎಸ್. ಪಾಟೀಲ, ಕಿರಿಯ ಸಹೋದರ ಕರ್ನಾಟಕ ರಾಜ್ಯ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ, ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ, ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ ಇವರ ಸಹೋದರರಾಗಿದ್ದು, ಅಪಾರ ಬಂಧು ಬಳಗ ಇದೆ.
ಅಂತ್ಯಕ್ರಿಯೆಯು ಬುಧವಾರ ಮಧ್ಯಾಹ್ನ 2 ಗಂಟೆಗೆ ರೋಣ ಪಟ್ಟಣದ ಜಕ್ಕಲಿ ರಸ್ತೆಯಲ್ಲಿರುವ ಪಾಟೀಲರ ತೋಟದಲ್ಲಿ ನೆರವೇರಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಅನೇಕ ಮಠಾಧೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ.