ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಕೇಸ್‌ ತನಿಖೆಗೆ ನಾಲ್ಕು ವಿಶೇಷ ತಂಡ ರಚನೆ

| Published : Aug 22 2024, 12:46 AM IST

ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಕೇಸ್‌ ತನಿಖೆಗೆ ನಾಲ್ಕು ವಿಶೇಷ ತಂಡ ರಚನೆ
Share this Article
  • FB
  • TW
  • Linkdin
  • Email

ಸಾರಾಂಶ

ತನಿಖೆಗಾಗಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ತಂಡ, ಧರ್ಮಸ್ಥಳ ಇಬ್ಬರು ಸಬ್ ಇನ್ಸೆಕ್ಟರ್ ಗಳ ತಂಡ ಸೇರಿದಂತೆ ನಾಲ್ಕು ವಿವಿಧ ತಂಡಗಳನ್ನು ದ.ಕ.ಎಸ್ಪಿ ಯವರು ರಚಿಸಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ: ಬೆಳಾಲಿನಲ್ಲಿ ಮನೆಗೆ ನುಗ್ಗಿ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಪ್ರಕರಣದ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಬುಧವಾರ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿಗಳನ್ನು ಪಡೆದರು. ಘಟನೆ ನಡೆದು 24ಗಂಟೆಗಳು ಕಳೆದಿದ್ದರೂ ಆರೋಪಿಗಳ ಬಗ್ಗೆ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ.

ಇವರದ್ದು ಒಂಟಿ ಮನೆಯಾಗಿದ್ದು ಮನೆಯ ಸಮೀಪ ಯಾವುದೇ ಸಿ.ಸಿ ಕ್ಯಾಮೆರಾಗಳಿಲ್ಲ. ಮೃತ ಬಾಲಕೃಷ್ಣ ಭಟ್ ಅವರ ಪುತ್ರ ಪುತ್ತೂರಿಗೆ ಹೋಗಿ ಹಿಂತಿರುಗಿ ಬಂದಾಗ ಕೊಲೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಸಮೀಪದ ಎಲ್ಲ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ಮನೆಯಲ್ಲಿ ಯಾವುದೇ ಕಳ್ಳತನ ನಡೆದಿಲ್ಲ ಎಂಬ ಮಾಹಿತಿಯೂ ಲಭ್ಯವಾಗುತ್ತಿದ್ದು ಇದು ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಎನ್ನಲಾಗಿದೆ. ತನಿಖೆಗಾಗಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ತಂಡ, ಧರ್ಮಸ್ಥಳ ಇಬ್ಬರು ಸಬ್ ಇನ್ಸೆಕ್ಟರ್ ಗಳ ತಂಡ ಸೇರಿದಂತೆ ನಾಲ್ಕು ವಿವಿಧ ತಂಡಗಳನ್ನು ದ.ಕ.ಎಸ್ಪಿ ಯವರು ರಚಿಸಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.