ಸಾರಾಂಶ
ಸರ್ಕಾರಿ ಸೇವೆಯಲ್ಲಿ ವರ್ಗಾವಣೆ, ನಿವೃತ್ತಿ ಸರ್ವೇಸಾಮಾನ್ಯವಾದದ್ದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಮಂಜುನಾಥ್ ಪ್ರಸನ್ನ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸರ್ಕಾರಿ ಸೇವೆಯಲ್ಲಿ ವರ್ಗಾವಣೆ, ನಿವೃತ್ತಿ ಸರ್ವೇಸಾಮಾನ್ಯವಾದದ್ದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಮಂಜುನಾಥ್ ಪ್ರಸನ್ನ ತಿಳಿಸಿದರು. ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನಲ್ಲಿ ಪ್ರಾಂಶುಪಾಲರ ಸಂಘದ ವತಿಯಿಂದ ನಿವೃತ್ತ ಪ್ರಾಂಶುಪಾಲರಿಗೆ ಆಯೋಜಿಸಿದ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನಿಸಿ ಮಾತನಾಡಿದರು. ಪ್ರಾಂಶುಪಾಲರು ವಿದ್ಯಾರ್ಥಿಗಳ ನಡುವೆ ಕೆಲಸ ಮಾಡುತ್ತಾರೆ. ವಿದ್ಯಾರ್ಥಿಗಳ ಫಲಿತಾಂಶ , ಶೈಕ್ಷಣಿಕ ವಾತಾವರಣ ಸುಧಾರಣೆ ಮಾಡುವುದರ ಜೊತೆಗೆ ಉಪನ್ಯಾಸಕರನ್ನು ಒಂದು ಕಡೆ ಸೇರಿಸಿಕೊಂಡು ಉತ್ತಮವಾದ ಫಲಿತಾಂಶ ರೂಪಿಸುವ ದಿಕ್ಕಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಜೊತೆಗೆ ಆಡಳಿತಾತ್ಮಕ ಕೆಲಸ ನಿರ್ವಹಿಸಬೇಕಾಗುತ್ತದೆ ಎಂದರು.ಒಂದು ಕಡೆ ಶೈಕ್ಷಣಿಕ ಅಭಿವೃದ್ಧಿ ಮಾಡುತ್ತ ಹೋದರೆ ಮತ್ತೊಂದು ಕಡೆ ವಿದ್ಯಾರ್ಥಿಗಳ ಅನುಕೂಲಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ವ್ಯವಸ್ಥೆ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಾಂಶುಪಾಲರು ಉತ್ತಮ ಕೆಲಸ ಮಾಡಿದ್ದಾರೆ. ನಿವೃತ್ತಿ ಹೊಂದಿರುವ ಪ್ರಾಂಶುಪಾಲರ ಜೀವನ ಸುಖಕರವಾಗಿರಲೆಂದು ಆಶಿಸಿದರು. ಸನ್ಮಾನ ಸ್ವೀಕರಿಸಿದ ನಿವೃತ್ತ ಪ್ರಾಂಶುಪಾಲ ಪ್ರಮೋದ್ ಮಾತನಾಡಿ, ಸರ್ಕಾರಿ ಕೆಲಸ ಸಿಗುವುದೇ ಕಷ್ಟವಾಗಿರುವ ಕಾಲದಲ್ಲಿ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವುದು ತುಂಬಾ ಖುಷಿಯಾಗಿದೆ. ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಲು ಅವಕಾಶ ನೀಡಿದ್ದ ಪಿಯುಡಿಡಿ ಮಂಜುನಾಥ್ ಪ್ರಸನ್ನ ಹಾಗೂ ಇತರರರಿಗೆ ಆಭಾರಿಯಾಗಿರುತ್ತೇನೆ ಎಂದರು.ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ:
ನಿವೃತ್ತ ಪ್ರಾಂಶುಪಾಲರಾದ ಎಸ್.ಪ್ರಮೋದ್, ಸ್ವಾಮಿ, ಎಸ್.ನಾಗೇಶ್, ಎಂ.ಜಯಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸೋಮಣ್ಣ ಅಧ್ಯಕ್ಷ ತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಬಸವರಾಜು, ಖಜಾಂಚಿ ಬಸವರಾಜಪ್ಪ ಹಾಗೂ ಪ್ರಾಂಶುಪಾಲರು, ಉಪನ್ಯಾಸಕಿ ಅಫ್ರೀನ್ ತಾಜ್ ಪ್ರಾರ್ಥಿಸಿದರು. ಉಪನ್ಯಾಸಕಿ ಜಿ.ಪಿ.ಶೀಲಾ ಸ್ವಾಗತಿಸಿದರು. ಉಪನ್ಯಾಸಕಿ ಪ್ರೇಮ ನಿರೂಪಿಸಿದರು.