ಕಡತ ಬಾಕಿ ಉಳಿಸಿಕೊಂಡ ಆರ್‌ಟಿಒ ಮೇಲೆ ರೇವಣ್ಣ ಗರಂ

| Published : Oct 17 2024, 12:02 AM IST

ಕಡತ ಬಾಕಿ ಉಳಿಸಿಕೊಂಡ ಆರ್‌ಟಿಒ ಮೇಲೆ ರೇವಣ್ಣ ಗರಂ
Share this Article
  • FB
  • TW
  • Linkdin
  • Email

ಸಾರಾಂಶ

ಆರ್‌.ಟಿ. ಒ ಕಚೇರಿಗೆ ಬುಧವಾರ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಭೇಟಿ ನೀಡಿ ಆರ್‌.ಟಿ.ಒ ರಾಜ್‌ಕುಮಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅರ್ಜಿ ಸಲ್ಲಿಸಿದ ಎಲ್ಲಾ ಕಡತಗಳನ್ನು ಬಾಕಿ ಉಳಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಡತಗಳನ್ನು ಹೊರ ತೆಗೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಚೇರಿಯಲ್ಲೇ ಸಾರಿಗೆ ಸಚಿವರಿಗೆ ಕರೆ ಮಾಡಿ ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತಿಳಿಸಿ, ಅವುಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಾರಿಗೆ ಸಚಿವರು ಹಾಗೂ ಕಾರ್ಯದರ್ಶಿಗಳು ಸ್ಥಳಕ್ಕೆ ಬರುವವರೆಗೂ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಹೊರವಲಯದಲ್ಲಿರುವ ಆರ್‌.ಟಿ. ಒ ಕಚೇರಿಗೆ ಬುಧವಾರ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಭೇಟಿ ನೀಡಿ ಆರ್‌.ಟಿ.ಒ ರಾಜ್‌ಕುಮಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಅರ್ಜಿ ಸಲ್ಲಿಸಿದ ಎಲ್ಲಾ ಕಡತಗಳನ್ನು ಬಾಕಿ ಉಳಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಡತಗಳನ್ನು ಹೊರ ತೆಗೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕಚೇರಿಯಲ್ಲೇ ಸಾರಿಗೆ ಸಚಿವರಿಗೆ ಕರೆ ಮಾಡಿ ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತಿಳಿಸಿ, ಅವುಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಾರಿಗೆ ಸಚಿವರು ಹಾಗೂ ಕಾರ್ಯದರ್ಶಿಗಳು ಸ್ಥಳಕ್ಕೆ ಬರುವವರೆಗೂ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಪೆಂಡಿಂಗ್ ಇಟ್ಟಿರುವ ಎಲ್ಲಾ ಕಡತಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಸಾರ್ವಜನಿಕರಿಗೆ ಸ್ಪಂದಿಸಬೇಕು. ರೈತರು, ಬಡವರು ಬಂದಾಗ ಅವರನ್ನು ಕಾಯಿಸದೇ ಬೇಗ ಕೆಲಸ ಮಾಡಿಕೊಟ್ಟು ಅವರಿಗೆ ನೆರವಾಗಬೇಕು. ಇಲ್ಲವಾದರೆ ಸ್ಥಳೀಯ ಶಾಸಕರು ಹಾಗೂ ತನ್ನ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಶಾಸಕ ಸ್ವರೂಪ್ ಪ್ರಕಾಶ್, ನಗರಸಭೆ ಅಧ್ಯಕ್ಷ ಚಂದ್ರೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.