ಲೈಂಗಿಕ ದೌರ್ಜನ್ಯ ಕೇಸಲ್ಲೂ ರೇವಣ್ಣಗೆ ಜಾಮೀನು

| Published : May 21 2024, 12:40 AM IST / Updated: May 21 2024, 02:32 PM IST

HD Revanna

ಸಾರಾಂಶ

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

 ಬೆಂಗಳೂರು :  ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಇದೇ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ತಾತ್ಕಾಲಿಕ ರಿಲೀಫ್ ಪಡೆದಿದ್ದ ರೇವಣ್ಣ ಅವರು ಕೊನೆಗೂ ನಿಟ್ಟುಸಿರುಬಿಟ್ಟಿದ್ದಾರೆ.

ತಮ್ಮ ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ಶೋಷಣೆ ನಡೆಸಿದ ಆರೋಪದ ಮೇರೆಗೆ ಮಾಜಿ ಸಚಿವ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಈ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ರೇವಣ್ಣ ಅವರು ಜಾಮೀನು ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಆರೋಪಿಗೆ ಜಾಮೀನು ನೀಡಿಕೆಗೆ ಎಸ್‌ಐಟಿ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. 

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು, ರೇವಣ್ಣ ಅವರಿಂದ ಐದು ಲಕ್ಷ ರು. ಬಾಂಡ್ ಶ್ಯೂರಿಟಿ ಪಡೆದು ಷರತ್ತು ಬದ್ಧ ಜಾಮೀನು ನೀಡಿದೆ. ಈಗಾಗಲೇ ತಮ್ಮ ಪುತ್ರನ ಮೇಲಿನ ಲೈಂಗಿಕ ಹಗರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಸಹ ರೇವಣ್ಣ ಅವರಿಗೆ ಜಾಮೀನು ಸಿಕ್ಕಿತ್ತು.