ಹೇಮಾವತಿ ಎಡದಂಡೆ ನಾಲೆಗೆ ನೀರು ಹರಿಸಿದರೆ ಅನುಕೂಲ ವಾಗುತ್ತದೆ. ನೀರು ಹರಿಸಲು ಸಾಧ್ಯವಾಗದಿದ್ದರೆ ಕಾವೇರಿ ನೀರಾವರಿ ನಿಗಮದಿಂದ ಪ್ರಕಟಣೆ ಹೊರಡಿಸಬೇಕು ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ಕೃಷಿ ಅಧಿಕಾರಿ ಮೋಹನ್‌ಕುಮಾರ್ ಮಾತನಾಡಿ, ’ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ದಾಸ್ತಾನು ಇದೆ’ ಎಂದು ತಿಳಿಸಿದರು. ಅನಕೆರೆ ಗ್ರಾಮದ ಬಳಿಯ ಶಂಭುಲಿಂಗೇಶ್ವರ ಏತ ನೀರಾವರಿ ಯೋಜನೆಯ ಭೂಸ್ವಾಧೀನಕ್ಕೆ ೧೪.೫೦ ಕೋಟಿ ಬಿಡುಗಡೆಯಾಗಿ ಹಲವು ವ?ಗಳಾಗಿದೆ. ಅದರೂ ಸಂಬಂಧಪಟ್ಟ ಅಧಿಕಾರಿಗಳು ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಲೂಕಿನ ದಂಡಿಗನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್. ಡಿ. ರೇವಣ್ಣ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ದಂಡಿಗನಹಳ್ಳಿ ಹೋಬಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಸಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು. ಉತ್ತರ ಕರ್ನಾಟಕದ ಹಲವು ಭಾಗದಲ್ಲಿ ರಸಗೊಬ್ಬರಕ್ಕೆ ತೊಂದರೆಯಾಗಿ ರೈತರು ಪರದಾಡುವಂತಾಗಿದೆ. ಈ ಭಾಗದಲ್ಲಿ ರೈತರು ತೊಂದರೆ ಅನುಭವಿಸಲು ಅವಕಾಶ ನೀಡುವುದು ಬೇಡ. ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೇ ೮೦ರ? ಮತ್ತು ಖಾಸಗಿ ಅಂಗಡಿಗಳ ಮೂಲಕ ಶೇ ೨೦ರ? ರಸಗೊಬ್ಬರ ಮಾರಾಟ ಮಾಡಲು ಅವಕಾಶ ನೀಡಬೇಕು. ಮಧ್ಯವರ್ತಿಗಳ ಹಾವಳಿ ತಡೆಯಬೇಕು. ಮಾರಾಟಗಾರರು ದರ ಹೆಚ್ಚಳ ಮಾಡದಂತೆ ಕ್ರಮ ವಹಿಸಬೇಕು ಎಂದು ತಾಕೀತು ಮಾಡಿದರು.

ಹೇಮಾವತಿ ಎಡದಂಡೆ ನಾಲೆಗೆ ನೀರು ಹರಿಸಿದರೆ ಅನುಕೂಲ ವಾಗುತ್ತದೆ. ನೀರು ಹರಿಸಲು ಸಾಧ್ಯವಾಗದಿದ್ದರೆ ಕಾವೇರಿ ನೀರಾವರಿ ನಿಗಮದಿಂದ ಪ್ರಕಟಣೆ ಹೊರಡಿಸಬೇಕು ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ಕೃಷಿ ಅಧಿಕಾರಿ ಮೋಹನ್‌ಕುಮಾರ್ ಮಾತನಾಡಿ, ’ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ದಾಸ್ತಾನು ಇದೆ’ ಎಂದು ತಿಳಿಸಿದರು. ಅನಕೆರೆ ಗ್ರಾಮದ ಬಳಿಯ ಶಂಭುಲಿಂಗೇಶ್ವರ ಏತ ನೀರಾವರಿ ಯೋಜನೆಯ ಭೂಸ್ವಾಧೀನಕ್ಕೆ ೧೪.೫೦ ಕೋಟಿ ಬಿಡುಗಡೆಯಾಗಿ ಹಲವು ವ?ಗಳಾಗಿದೆ. ಅದರೂ ಸಂಬಂಧಪಟ್ಟ ಅಧಿಕಾರಿಗಳು ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಸೆಸ್ಕ್‌ಗೆ ಈಗಾಗಲೇ ೩ ಕೋಟಿ ಬಿಡುಗಡೆ ಮಾಡಿಸಲಾಗಿದೆ. ಇನ್ನೂ ₹ ೫ ಕೋಟಿ ಬಿಡುಗಡೆ ಮಾಡಿಸಲಾಗುವುದು. ದಂಡಿಗನಹಳ್ಳಿ ಹೋಬಳಿಯಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಸೇರಿ ಆಗತ್ಯ ಕಾಮಗಾರಿ ಕೈಗೊಳ್ಳಬೇಕು. ಹೋಬಳಿಯ ಎಲ್ಲಾ ೭೧ ಹಳ್ಳಿಗಳಿಗೆ ಗ್ರಾಮ ಲೆಕ್ಕಿಗರು ಭೇಟಿ ನೀಡಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನದ ಪ್ರಮಾಣಪತ್ರವನ್ನು ಅರ್ಹರಿಗೆ ತಲುಪಿಸಬೇಕು. ಹಳ್ಳಿಗಳ ಟೀ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಇವೆ. ಇದಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದರು.ತಹಸೀಲ್ದಾರ್‌ ಜಿ.ಎಸ್. ಶಂಕರಪ್ಪ, ತಾಲೂಕು ಪಂಚಾಯಿತಿ ಇಒ ಜಿ. ಆರ್‌. ಹರೀಶ್, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್‌ ಆರ್‌ ರತ್ನಾ ಭಾಗವಹಿಸಿದ್ದರು.