ಸಾರಾಂಶ
ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಮುಖಾಂತರ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನಾಗರಿಕರು ಸದ್ಬಳಕೆ ಮಾಡಿಕೊಳ್ಳಿ ಎಂದು ತಹಸೀಲ್ದಾರ್ ಧನಂಜಯ್ ಹೇಳಿದರು. ಹನೂರಿನಲ್ಲಿ ಕಂದಾಯ ಅದಾಲತ್‌ನಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಹನೂರು
ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಮುಖಾಂತರ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನಾಗರಿಕರು ಸದ್ಬಳಕೆ ಮಾಡಿಕೊಳ್ಳಿ ಎಂದು ತಹಸೀಲ್ದಾರ್ ಧನಂಜಯ್ ಹೇಳಿದರು.ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆ ಹೊಲ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಾಮಾಜಿಕ ಭದ್ರತಾ ಯೋಜನೆ ಅಡಿ ಪಿಂಚಣಿ ಅದಾಲತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗುಡ್ಡಗಾಡು ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಆಯೋಜಿಸಿರುವ ಕಂದಾಯ ಅದಾಲತ್ ಕಾರ್ಯಕ್ರಮದ ಯೋಜನೆಯ ಮೂಲಕ ವಿವಿಧ ಗ್ರಾಮಸ್ಥರು ವಿಧವಾ ವೇತನ ವೃದ್ಧಾಪಿ ವೇತನ ವಿಕಲಚೇತನ ವೇತನ ಮನಸ್ವಿನಿ ಸಂಧ್ಯಾ ಸುರಕ್ಷಾ ಇನ್ನೂ ಅನೇಕ ಸರ್ಕಾರದ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮಸ್ಥರು ಮುಂದಾಗಬೇಕು ಎಂದರು.
ಗುಡ್ಡಗಾಡು ಪ್ರದೇಶದ ಜನರ ಅನುಕೂಲಕ್ಕಾಗಿ ತಾಲೂಕು ಆಡಳಿತ ವತಿಯಿಂದ ಆಯೋಜನೆ ಮಾಡಲಾಗಿರುವ ಕಾರ್ಯಕ್ರಮದ ಯೋಜನೆಯ ಬಗ್ಗೆ ಸಾರ್ವಜನಿಕರು ಮಾಹಿತಿ ಪಡೆದು ಹೆಚ್ಚು ಅರ್ಜಿಗಳನ್ನು ಸಲ್ಲಿಸಿ ಸದ್ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು. ಉಪತಹಸೀಲ್ದಾರ್ ಸುರೇಖಾ ಗ್ರಾಪಂ ಉಪಾಧ್ಯಕ್ಷ ಕೆಂಪಾರೆ ಗ್ರಾಮಲೆಕ್ಕಿಗ ವಿನೋದ್ ಸೋಲಿಗ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ ಹಾಗೂ ವಿವಿಧ ಗ್ರಾಮದ ಸಾರ್ವಜನಿಕರು, ನಿವಾಸಿಗಳು ಉಪಸ್ಥಿತರಿದ್ದರು.