ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣದ ಸಿದ್ಧತೆ ಪರಿಶೀಲನೆ

| Published : Dec 15 2024, 02:00 AM IST

ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣದ ಸಿದ್ಧತೆ ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

30 ವರ್ಷದ ನಂತರ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಜಿಲ್ಲೆಯಲ್ಲದೆ ಹೊರ ಜಿಲ್ಲೆ, ಹೊರನಾಡಿನಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ವೇದಿಕೆ ಸಿದ್ಧತೆ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ವೇದಿಕೆ ನಿರ್ಮಾಣ ಸಿದ್ಧತೆ ಕಾರ್ಯಗಳನ್ನು ಶಾಸಕ ಹಾಗೂ ಸಮ್ಮೇಳನದ ವೇದಿಕೆ ನಿರ್ವಹಣಾ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಶನಿವಾರ ಪರಿಶೀಲನೆ ನಡೆಸಿದರು.

ನಗರದ ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಪ್ರಧಾನ ವೇದಿಕೆ, ಸಮಾನಾಂತರ ವೇದಿಕೆಗಳ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆ ಕಾರ್ಯ ವೀಕ್ಷಿಸಿದರು. ಇದೇ ವೇಳೆ ವಸ್ತು ಪ್ರದರ್ಶನ ಮಳಿಗೆ, ವಾಣಿಜ್ಯ ಮಳಿಗೆ ಆಹಾರ, ಪುಸ್ತಕ ಮಳಿಗೆಗಳ ನಿರ್ಮಾಣದ ಸಿದ್ಧತೆ ಪರಿಶೀಲಿಸಿದರು.

30 ವರ್ಷದ ನಂತರ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಜಿಲ್ಲೆಯಲ್ಲದೆ ಹೊರ ಜಿಲ್ಲೆ, ಹೊರನಾಡಿನಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ವೇದಿಕೆ ಸಿದ್ಧತೆ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿಯ ಸಮ್ಮೇಳನವು ಹಲವು ಹೊಸತನಗಳಿಗೆ ಸಾಕ್ಷಿಯಾಗಲಿದೆ. ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಪಾರ್ಕಿಂಗ್ ಸ್ಥಳ, ಆಹಾರ ಮಳಿಗೆ, ವೇದಿಕೆಯ ಸಿದ್ಧತೆ ಕುರಿತು ಪರಿಶೀಲನೆ ನಡೆಸಲು ಭೇಟಿ ನೀಡಲಾಗಿದೆ ಎಂದರು.

ಈ ವೇಳೆ ಶಾಸಕ, ಸಮ್ಮೇಳನದ ಆಹಾರ ಸಮಿತಿ ಅಧ್ಯಕ್ಷ ರಮೇಶ ಬಂಡಿಸಿದ್ದೇಗೌಡ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ, ಕೆಆರ್ ಐಡಿಎಲ್ ಕಾರ್ಯಪಾಲಕ ಅಭಿಯಂತರ ಸೋಮಶೇಖರ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಮನ್ಮುಲ್ ಚುನಾವಣೆ ಮಳವಳ್ಳಿಯಿಂದ ವಿ.ಎಂ.ವಿಶ್ವನಾಥ್ ಆಯ್ಕೆ

ಮಳವಳ್ಳಿ:

ಫೆಬ್ರವರಿಯಲ್ಲಿ ನಡೆಯಲಿರುವ ಮನ್ಮುಲ್ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ತಾಲೂಕಿನಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಹಾಲಿ‌ ನಿರ್ದೇಶಕ ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ವಿ.ಎಂ.ವಿಶ್ವನಾಥ್ ಆಯ್ಕೆಯಾಗಿದ್ದಾರೆ.

ಮಳವಳ್ಳಿಯಿಂದ ವಿ.ಎಂ.ವಿಶ್ವನಾಥ್ ಹಾಗೂ ವಿಷಕಂಠೇಗೌಡ ಇಬ್ಬರು ಆಕಾಂಕ್ಷಿಗಳಾಗಿದ್ದರು. ಆದರೆ, ಇಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ‌ ವಿಷಕಂಠೇಗೌಡರನ್ನು ಮನವೊಲಿಸಲಾಯಿತು. ಇದರಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ವಿಶ್ವನಾಥ್ ಅವರ ಹೆಸರು ಅಂತಿಮಗೊಂಡಿದೆ. ಅಧಿಕೃತ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.