ಸಾರಾಂಶ
ಸಂಕ್ರಾಂತಿ ಸುಗ್ಗಿ ಹಬ್ಬದ ಅರ್ಥಪೂರ್ಣ ಆಚರಣೆ ಮಾಡಲಾಗುವುದು. ದೇಸಿ ಸೊಗಡಿನಂತೆ ರಂಜಿಸುವ ಸಂಕ್ರಾಂತಿ ಸುಗ್ಗಿ ಎಲ್ಲರ ಮನದಲ್ಲೂ ಮುಂದಿನ ದಿನಗಳಲ್ಲಿ ಜನಮಾನ ಸವಾಗುವಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.
ಕನ್ನಡಪ್ರಭ ವಾರ್ತೆ ದೇವಲಾಪುರ
ಜಿಲ್ಲಾಡಳಿತ ವತಿಯಿಂದ ಜ.14ರಂದು ರೈತರೊಂದಿಗೆ ನಡೆಯಲಿರುವ ಸಂಕ್ರಾಂತಿ ಸುಗ್ಗಿ ಹಬ್ಬದ ಸಿದ್ಧತೆ ಪರಿಶೀಲನೆ ನಡೆಸಿದ ಕೃಷಿ ಸಚಿವರ ಕಾರ್ಯದರ್ಶಿ ಪ್ರಭಾಕರ್ ವಿಶೇಷ ಮೆರುಗು ನೀಡಲಾಗಿದೆ ಎಂದರು.ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಗೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಮಾತನಾಡಿ, ಸಂಕ್ರಾಂತಿ ಸುಗ್ಗಿ ಹಬ್ಬದ ಅರ್ಥಪೂರ್ಣ ಆಚರಣೆ ಮಾಡಲಾಗುವುದು. ದೇಸಿ ಸೊಗಡಿನಂತೆ ರಂಜಿಸುವ ಸಂಕ್ರಾಂತಿ ಸುಗ್ಗಿ ಎಲ್ಲರ ಮನದಲ್ಲೂ ಮುಂದಿನ ದಿನಗಳಲ್ಲಿ ಜನಮಾನ ಸವಾಗುವಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.
ತಾಲೂಕಿನಲ್ಲಿ ವಿಶೇಷವಾಗಿ ರೈತ ಬಾಂಧವರು ಅವರುಗಳೇ ಬೆಣ್ಣೆಯನ್ನು ಮಾರಾಟ ಮಾಡುತ್ತಿದ್ದು, ವಿಶೇಷ ಮಳಿಗೆ ಆರಂಭ ಮಾಡಲು ಸೂಚಿಸಲಾಗಿದೆ. ರೈತರು ವಿಶೇಷವಾಗಿ ಬೆಳೆದಿರುವ ಅವರೆಕಾಯಿ ಮಳಿಗೆ ಮಾಡಲು ಅವಕಾಶ, ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ, ಕಬಡ್ಡಿ, ಕುಸ್ತಿ ಪಂದ್ಯಾವಳಿ ನಡೆಯುವ ಸ್ಥಳ ಪರಿಶೀಲನೆ ಮಾಡಿದರು.ಈ ವೇಳೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ತಾಲೂಕು ದಂಡಾಧಿಕಾರಿಗಳು. ತಾಪಂ ಇ ಹಾಜರಿದ್ದರು.
ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಕೀರ್ತನಾಗೆ 3ನೇ ಸ್ಥಾನಕೆ.ಆರ್.ಪೇಟೆ:
ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಪ್ರಬಂಧ ಸ್ಪರ್ಧೆಯಲ್ಲಿ ಗ್ರಾಮೀಣ ಪ್ರತಿಭೆ ಪಟ್ಟಣದ ಸ್ಕಾಲರ್ಸ್ ಪಿಯು ಕಾಲೇಜಿನ ಎಚ್.ಎಲ್.ಕೀರ್ತನ 3ನೇ ಸ್ಥಾನ ಪಡೆದುಕೊಂಡಿದ್ದಾರೆ.ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೀರ್ತನ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ತಾಲೂಕು ಮತ್ತು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಗೆ ಆಯ್ಕೆಯಾಗಿದ್ದರು.
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದು ಕಾಲೇಜು, ತಾಲೂಕು ಹಾಗೂ ಜಿಲ್ಲೆಯ ಕೀರ್ತಿ ತಂದ ಕೀರ್ತನ ಅವರನ್ನು ಕಾಲೇಜಿನ ಪ್ರಾಂಶುಪಾಲ ಎಸ್.ಮಂಜುನಾಥ್, ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿ ಗೌರವಿಸಿದರು.