ಸಾರಾಂಶ
‘ಸುಸ್ಥಿರ ನಡೆ ಸ್ವಚ್ಛತೆ ಕಡೆ’ ಕೈಪಿಡಿ ಬಿಡುಗಡೆ
ಕನ್ನಡಪ್ರಭ ವಾರ್ತೆ ಹಾಸನಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆ ತರಬೇತಿ ಪಡೆದುಕೊಳ್ಳುವ ಮೂಲಕ ಗ್ರಾಮ ಪಂಚಾಯಿತಿಗಳಲ್ಲಿ ಘನ
ತ್ಯಾಜ್ಯ ಘಟಕಗಳನ್ನು ಪ್ರಾರಂಭಿಸಿ, ಉತ್ತಮವಾಗಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ತಿಳಿಸಿದರು.ಹಾಸನದ ಜಿಲ್ಲಾ ಪಂಚಾಯತ್ ತರಬೇತಿ ಕೇಂದ್ರದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಹಾಸನ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆ ಕುರಿತು ಮೂರು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮದಲ್ಲಿ ‘ಸುಸ್ಥಿರ ನಡೆ ಸ್ವಚ್ಛತೆ ಕಡೆ’ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು.
ಪ್ರತಿಯೊಬ್ಬರು ತರಬೇತಿ ಪಡೆದು ಈ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಹೇಳಿ ಗ್ರಾಮ ಪಂಚಾಯಿತಿಗಳು ಜಿಪಿಎಲ್‌ಎಫ್‌ಗಳಿಗೆ ಸಹಕಾರ ನೀಡಿ, ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಂದ್ರಶೇಖರ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ದಿನೇಶ್, ಕೆ.ಎಸ್.ಶ್ರೀಹರಿಪ್ರಸಾದ್, ಡಿಪಿಎಂ ವಿಜಯ್ ಇದ್ದರು. ವಿವಿಧ ತಾಲೂಕುಗಳ ಟಿಪಿಎಂಗಳು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))