ಸಾರಾಂಶ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್.ವಿ. ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ರೋಟರಿ ಸಭಾಂಗಣದಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತಾದ ಮಾಹಿತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಬೈಂದೂರು
ಭ್ರಷ್ಟಾಚಾರವನ್ನು ಕಡಿಮೆ ಮಾಡುವಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಾಧ್ಯ. ಹಾಗಾಗಿ ಈ ಬಗೆಗೆ ಎಲ್ಲರಿಗೂ ತಿಳುವಳಿಕೆ ಇರಬೇಕಾದ ಅವಶ್ಯಕತೆ ಇದೆ ಎಂದು ಕಾಳಾವರದ ನಮ್ಮ ಪ್ರಗತಿ ಗ್ರಾಮೀಣ ಅಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯ ನಿರ್ದೇಶಕ ಅಶೋಕ್ ಎನ್.ಡಿ. ಹೇಳಿದರು.ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್.ವಿ. ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಿಕಾಂತ್ ಮಡಿವಾಳ ಶುಭ ಹಾರೈಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಭಟ್ ಮತ್ತು ವಿದ್ಯಾರ್ಥಿ ಪ್ರತಿನಿಧಿ ಧನರಾಜ್ ಉಪಸ್ಥಿತರಿದ್ದರು.ಲೇಖಾ ಮತ್ತು ಝುವೈನಾ ಪ್ರಾರ್ಥಿಸಿದರು. ರಜತ್ ಪೂಜಾರಿ ಸ್ವಾಗತಿಸಿದರು. ಎಸ್.ವಿ. ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಗನ್ ಖಾರ್ವಿ ನಿರೂಪಿಸಿದರು. ರೋಹನ್ ಖಾರ್ವಿ ವಂದಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))