ಕನ್ನಡಪ್ರಭ ವಾರ್ತೆ ಅಥಣಿಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರಿಗೆ ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸದಿರುವುದು ಹಾಗೂ ರಾಜ್ಯ ಮಾಹಿತಿ ಆಯೋಗದ ಆದೇಶಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಬೆಳಗಾವಿ ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರಿಗೆ ಕರ್ನಾಟಕ ಮಾಹಿತಿ ಆಯೋಗ ₹5,000 ದಂಡ ವಿಧಿಸಿದೆ.

ಕನ್ನಡಪ್ರಭ ವಾರ್ತೆ ಅಥಣಿ

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರಿಗೆ ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸದಿರುವುದು ಹಾಗೂ ರಾಜ್ಯ ಮಾಹಿತಿ ಆಯೋಗದ ಆದೇಶಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಬೆಳಗಾವಿ ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರಿಗೆ ಕರ್ನಾಟಕ ಮಾಹಿತಿ ಆಯೋಗ ₹5,000 ದಂಡ ವಿಧಿಸಿದೆ.ಪಟ್ಟಣದ ಮಾಹಿತಿ ಹಕ್ಕು ಹೋರಾಟಗಾರ ಅಜಿತ್ ಕಾಂಬಳೆ ಅವರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರೂ, ನಿಗದಿತ ಅವಧಿಯಲ್ಲಿ ಮಾಹಿತಿ ಲಭ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಮೇಲ್ಮನವಿ ಸಲ್ಲಿಸಿದ್ದರು.

ಪ್ರಕರಣವನ್ನು ಪರಿಗಣಿಸಿದ ಮಾಹಿತಿ ಆಯೋಗವು, ಅರ್ಜಿದಾರರಿಗೆ ಸಕಾಲದಲ್ಲಿ ಮಾಹಿತಿ ಒದಗಿಸದಿರುವುದು, ಆಯೋಗದ ಆದೇಶಗಳನ್ನು ಪಾಲಿಸದಿರುವುದು ಹಾಗೂ ವಿಚಾರಣೆಗೆ ಗೈರುಹಾಜರಾಗಿರುವುದನ್ನು ಗಮನಿಸಿ ಅಧಿಕಾರಿಗೆ ದಂಡ ವಿಧಿಸಿದೆ.

ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಲು ಹಾಗೂ ಸಾಮಾನ್ಯ ಜನರಿಗೆ ಮಾಹಿತಿ ಪಡೆಯುವ ಹಕ್ಕು ಸಮರ್ಪಕವಾಗಿ ದೊರೆಯುವಂತೆ ಮಾಡಲು ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಜಿತ್ ಕಾಂಬಳೆ ಒತ್ತಾಯಿಸಿದ್ದಾರೆ. ಕಾಯ್ದೆಯ ಆಶಯಕ್ಕೆ ಅನುಗುಣವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಸಕಾಲದಲ್ಲಿ ಮಾಹಿತಿ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.