ಸಾರಾಂಶ
ಕನ್ನಡಪ್ರಭ ವಾರ್ತೆ ಬೇಲೂರು
ಸಂವಿಧಾನದಲ್ಲಿ ನೀಡಿರುವ ಹಕ್ಕು ಹಾಗೂ ಕರ್ತವ್ಯ ಪಾಲಿಸಲು ಜಾಗೃತಿ ಮೂಡಿಸುತ್ತಿದ್ದರೂ ನಾಗರಿಕರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳದಿರುವುದು ವಿಷಾದನೀಯ ಎಂದು ಬೇಲೂರು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್. ಶಶಿಕಲಾ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ಚನ್ನಕೇಶವ ಭವನದಲ್ಲಿ ತಾಲೂಕು ಮಾನವ ಹಕ್ಕುಗಳ ಹೋರಾಟಗಾರರ ಒಕ್ಕೂಟದ ವತಿಯಿಂದ ಹಮ್ಮಿಕೊಂಡ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನದಲ್ಲಿ ಕಾಡಾನೆ ಹಾವಳಿ ಬಗ್ಗೆ ವರದಿಯಾಗುತ್ತಿದೆ. ಕಾಡಾನೆಗಳ ಸಮಸ್ಯೆಗೆ ಮೂಲ ಏನು ಎಂಬ ಬಗ್ಗೆ ಚಿಂತನೆ ಮಾಡುತ್ತಿಲ್ಲ, ಅತಿವೃಷ್ಟಿ-ಅನಾವೃಷ್ಟಿ, ಪ್ರಕೃತಿವಿಕೋಪ ಇಂತಹ ಘಟನೆಗಳು ನಡೆಯಲು ಮಾನವನ ದುರಾಸೆಯ ಪರಮಾವಧಿ, ಆಧುನೀಕತೆ ಹೆಸರಿನಲ್ಲಿ ಕಾಡು ಕಡಿಯುವುದು ಎಷ್ಟರ ಮಟ್ಟಿಗೆ ಸರಿ. ಮಾನವ ಹಕ್ಕುಗಳ ಸಂರಕ್ಷಣೆ ಸಂವಿಧಾನ ನೀಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪಾಲಿಸಬೇಕು ಎಂದರು.
ರಾಜ್ಯ ಮಾನವ ಹಕ್ಕುಗಳ ಹೋರಾಟಗಾರರ ಒಕ್ಕೂಟದ ರಾಜ್ಯಾಧ್ಯಕ್ಷ ಮನೀಶ್ ಸೂರ್ಯ ಮಾತನಾಡಿ, ರಾಜ್ಯದಲ್ಲಿ ನಮ್ಮ ಸಂಘಟನೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ಜನಸಾಮಾನ್ಯರಿಗೆ ನೆರವು ನೀಡುತ್ತಾ ಬಂದಿದೆ. ಹಾಸನ ಜಿಲ್ಲೆಯ ಅಧ್ಯಕ್ಷರಾದ ಎಂ.ಜೆ.ನಿಂಗರಾಜ್ ಸಾರಥ್ಯದಲ್ಲಿ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಕೂಡ ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ. ಸಮಾಜಕಲ್ಯಾಣ ಇಲಾಖೆ ವಸತಿಶಾಲೆಯಲ್ಲಿನ ಮಕ್ಕಳ ಮಾದಕ ಸೇವನೆ ಬಗ್ಗೆ ಪತ್ರಿಕೆಗಳ ವರದಿ ಮಾದರಿಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಹೋರಾಟಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಜೆ. ನಿಂಗರಾಜ್, ಪುರಸಭಾ ಅಧ್ಯಕ್ಷ ಎ.ಆರ್.ಅಶೋಕ್, ತಾಲೂಕು ಅಧ್ಯಕ್ಷ ಐ.ಎನ್. ಅರುಣ್ ಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿಗೌಡ, ಕ್ಷೇತ್ರಶಿಕ್ಷಣಾಧಿಕಾರಿ ರಾಜೇಗೌಡ, ಪತ್ರಕರ್ತರ ಸಂಘದ ಅಧ್ಯಕ್ಷೆ ವೈ.ಆರ್. ಭಾರತೀಗೌಡ, ಉಪಾಧ್ಯಕ್ಷ ರತ್ನಾಕರ್ ಬೆಟ್ಟಿಗೆರೆ, ಗೌರವಾಧ್ಯಕ್ಷ ಮಹಮ್ಮದ್ ಖಾಸೀಂ, ಲಕ್ಷ್ಮೀನಾರಾಯಣ, ಶಂಕರ್ ಪ್ರಸಾದ್, ದೀಕ್ಷೀತ್, ಹರೀಶ್, ಜೈಪಾಲ್, ಮಂಜುನಾಥ್, ಪುಟ್ಟೇಗೌಡ, ನೀಲಕಂಠ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಕಾರ್ಯಕ್ರಮದ ನಿರೂಪಣೆಯಲ್ಲಿ ಉಪನ್ಯಾಸಕ ಲಕ್ಷ್ಮೀನಾರಾಯಣ ನಡೆಸಿಕೊಟ್ಟರು.
----------------ಫೋಟೋ: 15ಎಚ್ಎಸ್ಎನ್8 :
ಮಾನವ ಹಕ್ಕುಗಳ ಹೋರಾಟಗಾರರ ಒಕ್ಕೂಟ ಬೇಲೂರು ತಾಲೂಕು ಘಟಕದಿಂದ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.