ಆತ್ಮಲಿಂಗದ ದರ್ಶನ ಪಡೆದ ರಿಷಬ್ ಶೆಟ್ಟಿ

| Published : Jun 07 2024, 12:34 AM IST

ಸಾರಾಂಶ

ರಿಷಭ್ ಶೆಟ್ಟಿ ಅವರು ತಮ್ಮ ಕಾಂತಾರ- 2 ಸಿನಿಮಾ ಯಶಸ್ಸು ಕಾಣಲೆಂದು ದೇವರಲ್ಲಿ ಪ್ರಾರ್ಥಿಸಿದರು ಎಂದು ತಿಳಿದು ಬಂದಿದೆ.

ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರಕ್ಕೆ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುವಾರ ಕುಟುಂಬ ಸಮೇತರಾಗಿ ಆಗಮಿಸಿ ಆತ್ಮಲಿಂಗದ ದರ್ಶನ ಪಡೆದರು.

ನಂತರ ಮಂದಿರದ ವತಿಯಿಂದ ಸ್ಮರಣಿಕೆ, ಪ್ರಸಾದ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇವೆರಡು ದೇವಾಲಯದ ಭೇಟಿ ಬಳಿಕ ತಾಮ್ರಗೌರಿ, ಸ್ಮಶಾನಕಾಳಿ ದೇವಾಲಯಕ್ಕೆ ತೆರಳಿ ದೇವಿ ದರ್ಶನ ಪಡೆದರು. ಈ ವೇಳೆ ಮಂದಿರದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು, ರಿಷಬ್‍ ಅವರ ಪತ್ನಿ ಪ್ರಗತಿ, ಮಕ್ಕಳಾದ ರನ್ವಿತ್, ರಾಧ್ಯಾ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್‌ ಕಲ್ಪಿಸಿದ್ದರು. ತಮ್ಮ ಕಾಂತಾರ- 2 ಸಿನಿಮಾ ಯಶಸ್ಸು ಕಾಣಲೆಂದು ದೇವರಲ್ಲಿ ಪ್ರಾರ್ಥಿಸಿದರು ಎಂದು ತಿಳಿದು ಬಂದಿದೆ.

ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು: ತಮ್ಮ ನೆಚ್ಚಿನ ನಟನನ್ನು ನೋಡುತ್ತಿದ್ದಂತೆ ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ದರ್ಶನ ಮುಗಿಸಿ ಬರುತ್ತೇನೆ ಎಂದರು ಕೇಳದೆ ಅಡ್ಡ ನಿಂತು ಫೋಟೊ ತೆಗೆಸಿಕೊಂಡಿದ್ದು ಕಂಡುಬಂತು. ರಿಷಬ್ ಸಹ ನಗುತ್ತಲೇ ಅಭಿಮಾನಿಗಳನ್ನು ಆತ್ಮೀಯವಾಗಿ ಮಾತನಾಡಿಸಿ ತೆರಳಿದರು.