ಶ್ರೀ ಶಾರದಾ ಪೀಠದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ರಿಷಬ್‌ಶೆಟ್ಟಿ

| Published : May 24 2024, 12:46 AM IST

ಶ್ರೀ ಶಾರದಾ ಪೀಠದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ರಿಷಬ್‌ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಟ ರಿಷಬ್‌ ಶೆಟ್ಟಿ ಕುಟುಂಬ ಸಮೇತರಾಗಿ ಬುಧವಾರ ಭೇಟಿ ನೀಡಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಶ್ರೀಮಠಕ್ಕೆ ಆಗಮಿಸಿದ ಇವರು ಶ್ರೀ ಶಾರದಾಂಬಾ ದೇವಾಲಯದಲ್ಲಿ ಶ್ರೀ ಶಾರದೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಕಾಂತಾರ ಹೀರೋ ಡಿವೈನ್‌ ಸ್ಟಾರ್ ರಿಷಬ್‌ ಶೆಟ್ಟಿ ಕುಟುಂಬ ಸಮೇತರಾಗಿ ಬುಧವಾರ ಭೇಟಿ ನೀಡಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಶ್ರೀಮಠಕ್ಕೆ ಆಗಮಿಸಿದ ಇವರು ಶ್ರೀ ಶಾರದಾಂಬಾ ದೇವಾಲಯದಲ್ಲಿ ಶ್ರೀ ಶಾರದೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಕ್ಷರಾಭ್ಯಾಸ ಮಂಟಪದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಕ್ರಿ.ಶ.8 ನೇ ಶತಮಾನದಲ್ಲಿ ಶ್ರೀ ಶಂಕರಾಚಾರ್ಯರಿಂದ ಸ್ಫಾಪಿಸಲ್ಪಟ್ಟ 4 ಆಮ್ನಾಯ ಪೀಠಗಳಲ್ಲಿ ಇಲ್ಲಿನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠವೂ ಒಂದಾಗಿದೆ. ಇಲ್ಲಿನ ಅಕ್ಷರಾಭ್ಯಾಸ ಮಂಟಪದಲ್ಲಿ ಹೆಚ್ಚಿನ ಭಕ್ತಾದಿಗಳು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುತ್ತಾರೆ.

23 ಶ್ರೀ ಚಿತ್ರ 1-

ಶೃಂಗೇರಿ ಶ್ರೀ ಮಠದ ಅಕ್ಷರಾಭ್ಯಾಸ ಮಂಟಪದಲ್ಲಿ ನಟ ರಿಷಬ್‌ ಶೆಟ್ಟಿ ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು.