ರಾಜ್ಯ ಸರ್ಕಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಜನರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಕಾರ್ಕಳ: ರಾಜ್ಯ ಸರ್ಕಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಜನರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಅವರು ಮಂಗಳವಾರ ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾಗಿರುವ ನೂತನ ಸಭಾಭವನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಸರಕಾರ ಈ ವಾರ್ಡಿನ ಜನರ ಅನುಕೂಲಕ್ಕಾಗಿ ನಗರೋತ್ಥಾನ ಯೋಜನೆಯಡಿ ನೂತನ ಸಭಾಭವನವನ್ನು ನಿರ್ಮಿಸಿದೆ. ಸ್ಥಳೀಯ ಜನರು ತಮ್ಮ ಕುಟುಂಬದ ಮದುವೆ ಸೇರಿದಂತೆ ಯಾವುದೇ ಸಭೆ, ಸಮಾರಂಭಗಳನ್ನು ನಡೆಸಲು ಮನೆಯ ಅಂಗಳದಲ್ಲಿ ಸ್ಥಳಾವಕಾಶದ ಕೊರತೆ ಇರುತ್ತದೆ. ಇದರ ಜೊತೆ ಹೆಚ್ಚಿನ ಹಣವನ್ನು ವ್ಯಯಿಸಿ, ಛತ್ರಗಳಲ್ಲಿ ಸಮಾರಂಭಗಳನ್ನು ನಡೆಸಬೇಕಾಗುತ್ತದೆ. ಮನೆಯ ಹತ್ತಿರದಲ್ಲಿ ಈ ತರಹದ ಸಭಾಭವನಗಳು ಇದ್ದಲ್ಲಿ ಕಡಿಮೆ ಖರ್ಚಿನಲ್ಲಿಯೇ ಶುಭ ಸಮಾರಂಭಗಳನ್ನು ನಡೆಸಲು ಅನುಕೂಲವಾಗಲಿದೆ ಎಂದರು.

ಈ ಭಾಗದ ಜನರ ಅನುಕೂಲಕ್ಕಾಗಿ ಸರ್ಕಾರ ನಗರೋತ್ಥಾನ ಯೋಜನೆಯಡಿ ನಿರ್ಮಿಸಿರುವ ನೂತನ ಸಭಾಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ಇದರ ನಿರ್ವಹಣೆಯನ್ನು ಸಮರ್ಪಕವಾಗಿ ಸ್ವಚ್ಛತೆಯೊಂದಿಗೆ ಮಾಡಿಕೊಂಡರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಪುರಸಭೆ ಸದಸ್ಯೆ ಪ್ರತಿಮಾ ರಾಣೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.