ಆರ್‌ಕೆಎಂ ಸಂಸ್ಥೆಯು ನಿರಂತರವಾಗಿ ಸಾಧಿಸುತ್ತಿರುವ ಉತ್ತಮ ಫಲಿತಾಂಶಗಳು ಸಂಸ್ಥೆಯಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಪ್ರತಿಷ್ಠಿತ ಪ್ರಶಸ್ತಿ ಪಡೆದಿರುವ ಆರ್‌ಕೆಎಂ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ತಂಡವನ್ನು ಅಭಿನಂದಿಸಿ, ಸಂಸ್ಥೆ ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಕಾಖಂಡಕಿ ಗುರುದೇವಾಶ್ರಮದ ಶಿವಯೋಗೀಶ್ವರ ಸ್ವಾಮೀಜಿ ಹಾರೈಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಆರ್‌ಕೆಎಂ ಸಂಸ್ಥೆಯು ನಿರಂತರವಾಗಿ ಸಾಧಿಸುತ್ತಿರುವ ಉತ್ತಮ ಫಲಿತಾಂಶಗಳು ಸಂಸ್ಥೆಯಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಪ್ರತಿಷ್ಠಿತ ಪ್ರಶಸ್ತಿ ಪಡೆದಿರುವ ಆರ್‌ಕೆಎಂ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ತಂಡವನ್ನು ಅಭಿನಂದಿಸಿ, ಸಂಸ್ಥೆ ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಕಾಖಂಡಕಿ ಗುರುದೇವಾಶ್ರಮದ ಶಿವಯೋಗೀಶ್ವರ ಸ್ವಾಮೀಜಿ ಹಾರೈಸಿದರು.ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಆಯುರ್ ವಿದ್ಯಾಭೂಷಣ ಪ್ರಶಸ್ತಿ-2026 ನಗರದ ಆರ್‌ಕೆಎಂ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಲಭಿಸಿದ ಹಿನ್ನೆಲೆ ಆರ್‌ಕೆಎಂ ಪಿಯು ಕಾಲೇಜು ಮತ್ತು ಆರ್‌ಕೆಎಂ ಕಾಲೇಜ್ ಆಫ್ ನರ್ಸಿಂಗ್ ವತಿಯಿಂದ ಜಂಟಿಯಾಗಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮನಗೂಳಿಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಶಿವಪ್ರಿಯಾನಂದ ಸ್ವಾಮೀಜಿ ಮಾತನಾಡಿ, ಆಯುರ್ವೇದ ಜ್ಞಾನವನ್ನು ಸಮಾಜಕ್ಕೆ ತಲುಪಿಸುವ ಹಾಗೂ ಜನರಿಗೆ ಆರೋಗ್ಯ ಸೇವೆ ನೀಡುವಲ್ಲಿ ಆರ್‌ಕೆಎಂ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಾಡುತ್ತಿರುವ ಕಾರ್ಯವನ್ನು ಶ್ಲಾಘಿಸಿದ ಅವರು, ಸಂಸ್ಥೆಯ ತಂಡವನ್ನು ಅಭಿನಂದಿಸಿದರು. ಸಂಸ್ಥೆ ತನ್ನ ಬೆಳ್ಳಿ ಮಹೋತ್ಸವ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಆರ್‌ಕೆಎಂ ಸಂಸ್ಥೆಯ ಕೀರ್ತಿಗೆ ಮತ್ತೊಂದು ಗರಿಯಾಗಿದೆ ಎಂದರು.ಆರ್‌ಕೆಎಂ ಸಮೂಹ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಕರ್ಪುರಮಠ, ಆರ್‌ಕೆಎಂ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಎನ್.ಎಂ. ರುದ್ರಗೌಡರ, ಆರ್‌ಕೆಎಂ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲ ಅಮಿತ, ಎಚ್ ಹಾಗೂ ಆರ್‌ಕೆಎಂ ಪಿಯು ಕಾಲೇಜಿನ ಪ್ರಾಂಶುಪಾಲೆ ಮೇಧಾ ಕರ್ಪುರಮಠ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.