ರಸ್ತೆ ಅಪಘಾತ: ಓರ್ವನ ಸಾವು

| Published : May 27 2025, 12:09 AM IST / Updated: May 27 2025, 12:10 AM IST

ಸಾರಾಂಶ

ತೀವ್ರವಾಗಿ ಗಾಯಗೊಂಡ ಶಿವರಾಮು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕನಕಪುರ: ತಾಲೂಕಿನ ಸಾತನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.

ಸಾತನೂರು ಟೌನ್ ಬಿಳಿಯ ಮಹದೇಶ್ವರ ದೇವಸ್ಥಾನ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿದ್ದು, ಕನಕಪುರ ರಸ್ತೆ ಬದಿಯಲ್ಲಿ ಈರ್ವರು ಬೈಕ್ ಸವಾರರು ಬರುತ್ತಿದ್ದರು. ದಾಳಿಂಬ ಗ್ರಾಮದ ಡಿ.ಎಸ್. ಶಿವರಾಮು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ತೀವ್ರವಾಗಿ ಗಾಯಗೊಂಡ ಶಿವರಾಮು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿವರಾಮು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕೆ ಕೆ ಪಿ ಸುದ್ದಿ 05: ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಿವರಾಮು.