ಕುಶಾಲನಗರದಲ್ಲಿ ನಡೆದ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿವೃತ್ತ ಯೋಧರೊಬ್ಬರು ಮೃತಪಟ್ಟಿದ್ದಾರೆ.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರದಲ್ಲಿ ನಡೆದ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿವೃತ್ತ ಯೋಧರೊಬ್ಬರು ಮೃತಪಟ್ಟಿದ್ದಾರೆ.ಕುಶಾಲನಗರದ ಗಂಧದ ಕೋಟೆ ನಿವಾಸಿ ನಿವೃತ್ತ ಯೋಧ ಸಿ ಎಸ್ ಮಿಟ್ಟು ಮೃತಪಟ್ಟವರು. ಆ.1 ರಂದು ಕುಶಾಲನಗರದಲ್ಲಿ ನಡೆದ ಅಪಘಾತದಲ್ಲಿ ತೀವ್ರ ತರಹದ ಏಟು ಉಂಟಾದ ಪರಿಣಾಮ ಮೈಸೂರು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.---------------------------------------------
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆಟೋ ಚಾಲಕ ಬಂಧನಕನ್ನಡ ಪ್ರಭವಾರ್ತೆ ಸುಂಟಿಕೊಪ್ಪ
ಯುವಕನೊಬ್ಬ ಬಾಲಕಿಗೆ ಮೊಬೈಲ್‌ನಲ್ಲಿ ಆಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ದೂರು ದಾಖಲಾಗಿದೆ.ಸುಂಟಿಕೊಪ್ಪ ಸಮೀಪದ ನಾಕೂರು ಕಾನ್‌ಬೈಲ್ ನಿವಾಸಿ ಆಟೋ ಚಾಲಕ ಪ್ರವೀಣ್ ಬಂಧಿತ ಆರೋಪಿ.
ಜು.೨೯ ರಂದು ಸಂಜೆ ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ ವಿದ್ಯಾರ್ಥಿನಿಯನ್ನು ಪ್ರವೀಣ್ ಎಂಬಾತ ಅಡ್ಡಗಟ್ಟಿ ಮೊಬೈಲ್‌ನಲ್ಲಿ ವಿಡಿಯೋ ತೋರಿಸುವುದಾಗಿ ತಿಳಿಸಿದ್ದಾನೆ. ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ಪೋಷಕರು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಭಯಗೊಂಡಿದ್ದ ಬಾಲಕಿ ಆರಂಭದಲ್ಲಿ ತನ್ನಗಾದ ದೌರ್ಜನ್ಯದ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿರಲಿಲ್ಲ ನಂತರ ತಾಯಿಗೆ ಬಾಲಕಿ ವಿಷಯ ತಿಳಿಸಿದರ ಪರಿಣಾಮ ಆ. ೩ ರಂದು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದು ಆರೋಪಿಯ ವಿರುದ್ದ ಬಿಎನ್‌ಎಸ್, ಪೋಕ್ಸೊ, ಜಾತಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿ ಪ್ರವೀಣ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.