ಅಪಘಾತದಲ್ಲಿ ನಾಗಸಂದ್ರಗಡ್ಡೆಯ ವಿಜಯ್, ವರುಣ್ ಹಾಗೂ ಪಾತಕೋಟದ ವಿಷ್ಣು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಮಕ್ಕಳಿಗೆ ಕೈ-ಕಾಲುಗಳ ಮೂಳೆ ಮುರಿದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಂತಾಮಣಿ: ತಾಲೂಕಿನ ಮಾರುತಿನಗರದ ಭೀಕರ ರಸ್ತೆ ಸಂಭವಿಸಿದ್ದು, ಅದೃಷ್ಟವಶಾತ್ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕರು ಅಕ್ಕನ ಮದುವೆಗೆಂದು ಹೋಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ನಾಗಸಂದ್ರಗಡ್ಡೆಯ ವಿಜಯ್, ವರುಣ್ ಹಾಗೂ ಪಾತಕೋಟದ ವಿಷ್ಣು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಮಕ್ಕಳಿಗೆ ಕೈ-ಕಾಲುಗಳ ಮೂಳೆ ಮುರಿದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಂತಾಮಣಿಯಿಂದ ಬೂರಗಮಾಕಲಹಳ್ಳಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಸಮಾರಂಭಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಶಿವರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.