ದೊಡ್ಡಗರಡಿ ರಸ್ತೆಯಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ
Author : KannadaprabhaNewsNetwork
Published : May 19 2026, 01:45 AM IST
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸ್ಥಳೀಯ ನಿವಾಸಿಗಳು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು. | Kannada Prabha
Image Credit: KP
ನಗರಾಭಿವೃದ್ಧಿಗೆ ಮೂಲಸೌಕರ್ಯ ಕಾಮಗಾರಿಗಳು ಅತ್ಯವಶ್ಯಕವಾಗಿದ್ದು, ಉತ್ತಮ ರಸ್ತೆ ಮತ್ತು ಸಮರ್ಪಕ ಚರಂಡಿ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಮಳೆಗಾಲದಲ್ಲಿ ದೊಡ್ಡಗರಡಿ ರಸ್ತೆಯಲ್ಲಿ ನೀರು ನಿಲ್ಲುವುದು, ಚರಂಡಿ ಸಮಸ್ಯೆ ಹಾಗೂ ಹಾಳಾದ ರಸ್ತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಇದೀಗ ರಸ್ತೆ, ಯುಜಿಡಿ ಮತ್ತು ಚರಂಡಿ ಕಾಮಗಾರಿ ಪೂರ್ಣಗೊಂಡ ಬಳಿಕ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಹಾಸನ
ನಗರದ ದೊಡ್ಡಗರಡಿ ರಸ್ತೆಯಲ್ಲಿ ಸಿಎಂಐಡಿಪಿ ಅನುದಾನದ ₹ 88 ಲಕ್ಷ ಹಾಗೂ ಮಹಾನಗರ ಪಾಲಿಕೆ ಅನುದಾನದ 17.25 ಲಕ್ಷ ಸೇರಿ ಒಟ್ಟು 1 ಕೋಟಿಗೂ ಹೆಚ್ಚು ವೆಚ್ಚದ ರಸ್ತೆ, ಚರಂಡಿ ಹಾಗೂ ಯುಜಿಡಿ ಕಾಮಗಾರಿಗೆ ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಈ ವೇಳೆ ಶಾಸಕ ಎಚ್. ಪಿ. ಸ್ವರೂಪ್ ಮಾತನಾಡಿ, ನಗರಾಭಿವೃದ್ಧಿಗೆ ಮೂಲಸೌಕರ್ಯ ಕಾಮಗಾರಿಗಳು ಅತ್ಯವಶ್ಯಕವಾಗಿದ್ದು, ಉತ್ತಮ ರಸ್ತೆ ಮತ್ತು ಸಮರ್ಪಕ ಚರಂಡಿ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಮಳೆಗಾಲದಲ್ಲಿ ದೊಡ್ಡಗರಡಿ ರಸ್ತೆಯಲ್ಲಿ ನೀರು ನಿಲ್ಲುವುದು, ಚರಂಡಿ ಸಮಸ್ಯೆ ಹಾಗೂ ಹಾಳಾದ ರಸ್ತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಇದೀಗ ರಸ್ತೆ, ಯುಜಿಡಿ ಮತ್ತು ಚರಂಡಿ ಕಾಮಗಾರಿ ಪೂರ್ಣಗೊಂಡ ಬಳಿಕ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸ್ಥಳೀಯ ನಿವಾಸಿಗಳು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.