ಕಬ್ಬಿನ ಬೆಳೆಗೆ ಪ್ರತಿ ಟನ್‌ಗೆ ₹3500 ಹಾಗೂ ಬಾಕಿ ಹಣ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದ್ದು, ನಗರದ ಎ.ಜಿ. ದೇಸಾಯಿ ವೃತ್ತದಲ್ಲಿ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ, ಆಟೋರಿಕ್ಷಾ ಚಾಲಕರು, ಮಾಲೀಕರ ಸಂಘದ ಸಹಯೋಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಕಬ್ಬಿನ ಬೆಳೆಗೆ ಪ್ರತಿ ಟನ್‌ಗೆ ₹3500 ಹಾಗೂ ಬಾಕಿ ಹಣ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದ್ದು, ನಗರದ ಎ.ಜಿ. ದೇಸಾಯಿ ವೃತ್ತದಲ್ಲಿ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ, ಆಟೋರಿಕ್ಷಾ ಚಾಲಕರು, ಮಾಲೀಕರ ಸಂಘದ ಸಹಯೋಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು .ವಿದ್ಯಾರ್ಥಿ ಮುಖಂಡರು, ರೈತರು, ಕರವೇ ಪದಾಧಿಕಾರಿಗಳು ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಘೊಷಣೆ ಕೂಗಿ ಆಕ್ರೋಶ ಹೊರಹಾಕಿದರು. ರೈತ ಮುಖಂಡ ಸುರೇಶ ಹಂಚನಾಳ ಮಾತನಾಡಿ, ರಾಜಕಾರಣಿಗಳೇ ಸಕ್ಕರೆ ಕಾರ್ಖಾನೆಗಳ ಮಾಲೀಕರಾಗಿದ್ದಾರೆ. ರೈತರ ನೋವು, ರೈತರ ಹೋರಾಟಗಳು ಇವರಿಗೆ ಲೆಕ್ಕಕ್ಕಿಲ್ಲದಂತಾಗಿದೆ. ರೈತರು ಆರ್ಥಿಕವಾಗಿ ಸಬಲರಾಗಬಾರದು ಎಂಬ ಉದ್ದೇಶ ದಿಂದ ರೈತರ ಹೋರಾಟ, ಮನವಿಗಳಿಗೆ ಸ್ಪಂದಿಸುತ್ತಿಲ್ಲ ಮುಂಬರುವ ದಿನಮಾನದಲ್ಲಿ ಕಾಲವೇ ಇವರಿಗೆ ಸೂಕ್ತ ಉತ್ತರ ನೀಡಲಿದೆ ಎಂದು ಹೇಳಿದರು.

ವಿದ್ಯಾರ್ಥಿನಿ ಪ್ರಿಯಾಂಕಾ, ರೈತ ಮುಖಂಡ ರಾಜು ನಧಾಪ್‌, ಪರುಶರಾಮ ಈಟಿ . ಪ್ರದೀಪ ಮೆಟ್ಟಗುಡ. ಡಾ. ಅಜೇಯ ಕುಲಕರ್ಣಿ ಇತರರು ಮಾತನಾಡಿದರು.