ಸಾರಾಂಶ
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಳಿಕ ಪೇಟೆಯ ಪಂಜ ಕ್ರಾಸ್ ಬಳಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಕಡಬ ಪೇಟೆ ಸೇರಿದಂತೆ ತಾಲೂಕಿನ ಆಲಂಕಾರು ,ಪೆರಾಬೆ, ನೂಜಿಬಾಳ್ತಿಲ, ರಾಮಕುಂಜ, ಕೊಯಿಲ, ಸವಣೂರು, ಕಾಣಿಯೂರು ಮೊದಲಾದ ಗ್ರಾಮೀಣ ಭಾಗದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ತಾಲೂಕಿನಾದ್ಯಂತ ಮೆಡಿಕಲ್, ಹಾಲು ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಸರ್ಕಾರಿ ಕಚೇರಿ, ಬ್ಯಾಂಕ್ ಗಳು ಎಂದಿನಂತೆ ತೆರೆದು ಸೇವೆ ನೀಡಿದವು. ವಾಹನ ಸಂಚಾರ ವಿರಳವಾಗಿತ್ತು. ಜನರ ಒಡಾಟವೂ ಕಡಿಮೆಯಿತ್ತು.
ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ
ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕಡಬ ತಾಲೂಕಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತಾಲೂಕು ಕೇಂದ್ರ ಕಡಬ ಪೇಟೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಬೆಳಗ್ಗೆ ಒಂದೂ ಗಂಟೆಗೂ ಹೆಚ್ಚು ಕಾಲ ಕಡಬ -ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದರು. ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿದರು.ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಳಿಕ ಪೇಟೆಯ ಪಂಜ ಕ್ರಾಸ್ ಬಳಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಕಡಬ ಪೇಟೆ ಸೇರಿದಂತೆ ತಾಲೂಕಿನ ಆಲಂಕಾರು ,ಪೆರಾಬೆ, ನೂಜಿಬಾಳ್ತಿಲ, ರಾಮಕುಂಜ, ಕೊಯಿಲ, ಸವಣೂರು, ಕಾಣಿಯೂರು ಮೊದಲಾದ ಗ್ರಾಮೀಣ ಭಾಗದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ತಾಲೂಕಿನಾದ್ಯಂತ ಮೆಡಿಕಲ್, ಹಾಲು ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಸರ್ಕಾರಿ ಕಚೇರಿ, ಬ್ಯಾಂಕ್ ಗಳು ಎಂದಿನಂತೆ ತೆರೆದು ಸೇವೆ ನೀಡಿದವು. ವಾಹನ ಸಂಚಾರ ವಿರಳವಾಗಿತ್ತು. ಜನರ ಒಡಾಟವೂ ಕಡಿಮೆಯಿತ್ತು.
ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ.