ಸಾರಾಂಶ
ಟನ್ ಕಬ್ಬಿಗೆ ₹3500 ದರ ನೀಡುವಂತೆ ಆಗ್ರಹಿಸಿ ತಾಲೂಕಿನ ಹುಲ್ಯಾಳ, ಹಿಪ್ಪರಗಿ ಗ್ರಾಮಗಳಲ್ಲಿ ರೈತರು ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.ಟನ್ ಕಬ್ಬಿಗೆ ₹3500 ದರ ನಿಗದಿ ಪಡಿಸಬೇಕು, ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಟಾವು ಹಾಗೂ ಕಬ್ಬಿನ ಬಿಲ್ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ಟನ್ ಕಬ್ಬಿಗೆ ₹3500 ದರ ನೀಡುವಂತೆ ಆಗ್ರಹಿಸಿ ತಾಲೂಕಿನ ಹುಲ್ಯಾಳ, ಹಿಪ್ಪರಗಿ ಗ್ರಾಮಗಳಲ್ಲಿ ರೈತರು ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.ಟನ್ ಕಬ್ಬಿಗೆ ₹3500 ರೂ ದರ ನಿಗದಿ ಪಡಿಸಬೇಕು, ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಟಾವು ಹಾಗೂ ಕಬ್ಬಿನ ಬಿಲ್ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ಸರ್ಕಾರ ನಿಗದಿ ಪಡಿಸಿರುವ ₹3300 ದರ ನೀಡುವಲ್ಲಿ ಕಾರ್ಖಾನೆ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ರಿಕವರಿ ವಿಷಯದಲ್ಲಿ ಪಾರದರ್ಶಕತೆ ಇಲ್ಲ. 10.25 ರಿಕವರಿಗೆ ₹3150 ಹಾಗೂ 11.25 ಕ್ಕೆ ₹3300 ನೀಡುವುದಾಗಿ ಹೇಳುತ್ತಿರುವ ಕಾರ್ಖಾನೆ ಮಾಲೀಕರು ರೈತರ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.ರಿಕವರಿ ನೆಪ ಹೇಳಿ ಸರ್ಕಾರ ನಿಗದಿ ಪಡಿಸಿದ ₹3300ಗಿಂತಲೂ ಕಡಿಮೆ ದರ ನೀಡುತ್ತಿರುವ ಕಾರ್ಖಾನೆಗಳ ಮಾಲೀಕರ ವಿರುದ್ಧ ಪುನಃ ಹೋರಾಟ ಆರಂಭಿಸಲಾಗಿದೆ ಎಂದು ಹೇಳಿದರು.ಹುಲ್ಯಾಳ, ಮರೆಗುದ್ದಿ, ಹುಣಸಿಕಟ್ಟಿ ಸೇರಿದಂತೆ ವಿವಿಧ ಗ್ರಾಮಗಳ ಕಬ್ಬು ಬೆಳೆಗಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
)
;Resize=(128,128))
;Resize=(128,128))
;Resize=(128,128))