ಗ್ರಾಮಾಭಿವೃದ್ಧಿಗೆ ರಸ್ತೆ ಅಭಿವೃದ್ಧಿಯೂ ಮುಖ್ಯ: ಶಾಸಕ ಎಚ್.ಟಿ.ಮಂಜು

| Published : Oct 24 2025, 01:00 AM IST

ಗ್ರಾಮಾಭಿವೃದ್ಧಿಗೆ ರಸ್ತೆ ಅಭಿವೃದ್ಧಿಯೂ ಮುಖ್ಯ: ಶಾಸಕ ಎಚ್.ಟಿ.ಮಂಜು
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದೊಂದಿಗೆ ನಿರಂತರ ಅನುದಾನ ತರಲು ಹೋರಾಟ ಮಾಡುವ ಸ್ಥಿತಿ ಇದೆ. ಕಾಂಗ್ರೆಸ್ ಶಾಸಕರ ಗತಿಯೂ ಕೂಡ ಇದೆ ಆಗಿದೆ. ನಾವು ಬಂದಿರುವುದು ಕ್ಷೇತ್ರದ ಅಭಿವೃದ್ಧಿಗಾಗಿ. ಜನತೆ ಆಶೀರ್ವಾದ ಮಾಡಿ ಕಳಿಸಿದ್ದಾರೆ. ಇರುವ ಅವಧಿಯಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಬೇಕು ಎಂಬುದು ಮೊದಲ ಆಸೆ.

ಕನ್ನಡಪ್ರಭ ವಾರ್ತೆ ಕಿಕ್ಕೇರಿ

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಂರ್ಪಕ ಸಾಧನವಾದ ರಸ್ತೆಗಳ ಅಭಿವೃದ್ಧಿಗೆ ಅವಶ್ಯ ಎಂದು ಶಾಸಕ ಎಚ್.ಟಿ.ಮಂಜು ಹೇಳಿದರು.

ಚನ್ನರಾಯಪಟ್ಟಣ -ಮೈಸೂರು ರಾಜ್ಯ ಹೆದ್ದಾರಿ ತಿರುವಿನಲ್ಲಿ ಹೋಬಳಿಯ ಮಾದಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ರಸ್ತೆ ಸುಮಾರು 8 ಕಿ.ಮೀ.ಉದ್ದದ ರಸ್ತೆಯಾಗಿದೆ. ಸುಮಾರು 1 ಕೋಟಿ ರು.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ರಸ್ತೆ ಅಭಿವೃದ್ಧಿಯಿಂದ ಮಾದಾಪುರ, ಚಿನ್ನೇನಹಳ್ಳಿ, ಗೊಂದಿಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಜನತೆಗೆ ಅನುಕೂಲವಾಗಲಿದೆ. ವಿವಿಧ ಯೋಜನೆಗಳಡಿಯಲ್ಲಿ ರಸ್ತೆ ಅಭಿವೃದ್ಧಿಗೆ ಹಲವು ಕ್ರಿಯಾಯೋಜನೆ ರೂಪಿಸಿ ಕಾಮಗಾರಿ ಮಾಡಲಾಗುತ್ತಿದೆ. ತಾಲೂಕಿನ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಅನುದಾನದ ಕೊರತೆ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರದೊಂದಿಗೆ ನಿರಂತರ ಅನುದಾನ ತರಲು ಹೋರಾಟ ಮಾಡುವ ಸ್ಥಿತಿ ಇದೆ. ಕಾಂಗ್ರೆಸ್ ಶಾಸಕರ ಗತಿಯೂ ಕೂಡ ಇದೆ ಆಗಿದೆ. ನಾವು ಬಂದಿರುವುದು ಕ್ಷೇತ್ರದ ಅಭಿವೃದ್ಧಿಗಾಗಿ. ಜನತೆ ಆಶೀರ್ವಾದ ಮಾಡಿ ಕಳಿಸಿದ್ದಾರೆ. ಇರುವ ಅವಧಿಯಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಬೇಕು ಎಂಬುದು ಮೊದಲ ಆಸೆ ಎಂದರು.

ಸದ್ಯದ ಪರಿಸ್ಥಿತಿಯಲ್ಲಿ ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂಬ ಅರಿವು ನನ್ನ ತಾಲೂಕಿನ ಮತದಾರರಿಗೆ ಇದೆ. ಒಬ್ಬ ಶಾಸಕನ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಶಾಸಕರಿಗೆ ಸ್ಪಂದನೆ ಮಾಡುತ್ತಿದೆ ಎಂಬುದನ್ನು ಪ್ರತಿದಿನ ಪತ್ರಿಕೆ, ಟಿವಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಪರಿಸ್ಥಿತಿ ನೋಡಿದ್ದಾರೆ ಎಂದರು.

ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಶಾಸಕರಾಗಿರುವ ನನ್ನ ಕೆಲಸದ ಬಗ್ಗೆ ಕಾರ್ಯಕರ್ತರಿಗೆ ತೃಪ್ತಿ ಇದೆ. ಆದರೂ ಕ್ಷೇತ್ರದ ಜನರು ನನಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಜನರ ಕಷ್ಟ ಸುಖಗಳಿಗೆ ನನ್ನಕೈಲಾದ ಸೇವೆ ಮಾಡಲು ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ತಿಂಗಳಲ್ಲಿ 25 ದಿನ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದೇನೆ ಎಂದರು.

ಈ ವೇಳೆ ಕಿಕ್ಕೇರಿ ಹೋಬಳಿ ಜೆಡಿಎಸ್‌ ಅಧ್ಯಕ್ಷ ಕಾಯಿ ಮಂಜೇಗೌಡ, ತಾಪಂ ಮಾಜಿ ಸದಸ್ಯ ಐಕನಹಳ್ಳಿ ಕೃಷ್ಣಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿಮಲ್ಲೇಶ್, ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಶೇಖರ್, ಗ್ರಾಪಂ ಮಾಜಿ ಸದಸ್ಯ ಶೇಖರ್, ಮುಖಂಡರಾದ ದೇವೇಗೌಡ, ಧರ್ಮರಾಜು, ಅಶೋಕ್, ಯೋಗಣ್ಣ, ಅಣ್ಣೇಗೌಡ, ಮುರುಳೀಧರ್, ಸಂದೀಪ್, ಕಾಂತರಾಜು, ಎಇಇ ಬೋರಯ್ಯ, ಎಇ ಬಸವೇಗೌಡ, ಜೆಇ ಕೃಷ್ಣಮೂರ್ತಿ, ಗುತ್ತಿಗೆದಾರ ಆರ್.ಪಿ.ರೇವಣ್ಣ, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್‌ ಇದ್ದರು.