ಸಾರಾಂಶ
ಶಿರಹಟ್ಟಿ: ಮತಕ್ಷೇತ್ರದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಯಾದರೆ ಗ್ರಾಮ, ಪಟ್ಟಣ ಅಭಿವೃದ್ಧಿಯಾಗಲು ಸಾಧ್ಯ. ಶಿರಹಟ್ಟಿ ಮೀಸಲು ಮತಕ್ಷೇತ್ರಕ್ಕೆ ಹಂತ- ಹಂತವಾಗಿ ಬಿಡುಗಡೆಯಾಗುತ್ತಿರುವ ಅನುದಾನ ಬಳಕೆ ಮಾಡಿಕೊಂಡು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ತಿಳಿಸಿದರು.ಭಾನುವಾರ ತಾಲೂಕಿನ ನವೆಭಾವನೂರ ಗ್ರಾಮದಲ್ಲಿ ಬಯಲುಸೀಮೆ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿರುವ ರಸ್ತೆಗಳ ಅಭಿವೃದ್ಧಿಪಡಿಸುವುದರಿಂದ ಗ್ರಾಮಗಳು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ನಡೆಸಿದ ಯಾವುದೇ ಪಕ್ಷದ ಸರ್ಕಾರವಾಗಲಿ, ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿವೆ. ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಇದರಿಂದ ಜನರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ ಎಂದರು.ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜನರು ಪಕ್ಷಭೇದ ಮರೆತು ಸಮಸ್ಯೆಗಳನ್ನು ನನ್ನ ಗಮನಕ್ಕೆ ತರಬೇಕು. ಅವುಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಕೆಲಸ ಮಾಡುತ್ತೇನೆ. ಗ್ರಾಮೀಣ ಭಾಗದಲ್ಲಿ ಕುಡಿಯುನ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಸಾಕಷ್ಟಿದೆ. ಈ ಎಲ್ಲ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನಿಡಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಯೋಜನೆಗಳು ಎಲ್ಲ ವರ್ಗದ ಜನರಿಗೆ ತಲುಪಿದಾಗ ಮಾತ್ರ ಸರ್ವತೋಮುಖವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಈ ಭಾಗದ ರೈತರ ಬಹುದಿನಗಳ ಆಶಯ ಇಂದು ಈಡೇರಿದಂತಾಗಿದ್ದು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ನನ್ನ ಪ್ರಮುಖ ಗುರಿಯಾಗಿದೆ ಎಂದರು.ತಾಲೂಕಿನ ಜನತೆ ನಿರೀಕ್ಷಿಸಿದ ರೀತಿಯಲ್ಲಿ ಕೆಲಸ ಮಾಡಲಾಗುತ್ತಿಲ್ಲ. ಇದು ಕ್ಷೇತ್ರದ ಜನತೆಗೂ ಗೊತ್ತಿರುವ ವಿಷಯವಾಗಿದೆ. ಈ ಹಿಂದೆ ಒಂದೇ ರಸ್ತೆಗೆ ಎರಡ್ಮೂರು ಯೋಜನೆಯಲ್ಲಿ ಅನುದಾನ ನೀಡಿದರೂ ನಿರ್ಮಿಸಿದ ಕೆಲವೇ ತಿಂಗಳಲ್ಲಿ ರಸ್ತೆಗಳು ಹಾಳಾದ ಉದಾಹರಣೆಗಳಿವೆ. ಇಂತಹ ಪದ್ಧತಿಯನ್ನು ಅಧಿಕಾರಿಗಳು, ಗುತ್ತಿಗೆದಾರರು ಕೈಬಿಡಬೇಕು. ಕಾಮಗಾರಿ ಕ್ರಿಯಾಯೋಜನೆ ಅಂದಾಜುಪಟ್ಟಿ ಪ್ರಕಾರ ಕೆಲಸ ನಿರ್ವಹಿಸಬೇಕು. ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು, ಕಾಮಗಾರಿ ಗುಣಮಟ್ಟ ಖಾತ್ರಿಪಡಿಸಿಕೊಳ್ಳಬೇಕು ಎಂದರು.ಗ್ರ‍್ರಾಮೀಣ ಭಾಗದ ರಸ್ತೆಗಳು ಸುಧಾರಣೆಯಾದಲ್ಲಿ ಮಾತ್ರ ದೇಶದ ಅಭಿವೃದ್ದಿ ಸಾಧ್ಯ. ಇದು ಕೇಂದ್ರದ ಬಿಜೆಪಿ ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಮುಖ್ಯವಾಗಿ ರಾಜ್ಯ ಸರ್ಕಾರ ರೈತ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಆಡಳಿ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಕಷ್ಟು ಅನುದಾನ ನೀಡಿ ರೈತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದರು ಎಂದರು.ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಪಾಟೀಲ, ಜಾನು ಲಮಾಣಿ, ಶಂಕರ ಮರಾಠೆ, ಸಿದ್ದಲಿಂಗಯ್ಯ ಹಿರೇಮಠ, ರಮೇಶ ಚಿಟ್ಟಿ, ವಸಂತಪ್ಪ ಕೊಡ್ಲಿ, ಮಾಬುಸಾಬ ಕುರ್ತಕೋಟಿ, ಮಾಬಣ್ಣ ಕುರ್ತಕೋಟಿ, ಹುಸೇನಸಾಬ ಕುರ್ತುಕೋಟಿ, ಶಿವಾನಂದ ಚಿಟ್ಟಿ, ಚಿನ್ನಪ್ಪ ಚಿಟ್ಟಿ, ಬಸವನಗೌಡ ಪಾಟೀಲ, ಕೊಟ್ರಗೌಡರ ಪಾಟೀಲ, ವಿರೂಪಾಕ್ಷಿ ಹಿರೇಮಠ, ರಮೇಶ್ ಲಮಾಣಿ, ಪವಿತ್ರಾ ಕಲ್ಕುಟಿಗರ, ಪಂಚಾಕ್ಷರಯ್ಯ ಹಿರೇಮಠ, ಭೀಮಪ್ಪ ಪಾಟೀಲ, ಅರುಣ ತಿಗರಿ, ಮಹೇಶ್ ಪವಾರ ಇದ್ದರು.