ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿಗಾಗಿ 20,000 ಕೋಟಿ ಅನುದಾನ ಮೀಸಲಿಟ್ಟು ಮಹತ್ವಾಕಾಂಕ್ಷೆಯ ಯೋಜನೆಯನ್ನು ಘೋಷಿಸಿದ್ದು, ಇದರಡಿ ವಿರಾಜಪೇಟೆ ಕ್ಷೇತ್ರಕ್ಕೂ ವಿಶೇಷ ಅನುದಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಹೇಳಿದರು.

ನಾಪೋಕ್ಲು: ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿಗಾಗಿ 20,000 ಕೋಟಿ ಅನುದಾನ ಮೀಸಲಿಟ್ಟು ಮಹತ್ವಾಕಾಂಕ್ಷೆಯ ಯೋಜನೆಯನ್ನು ಘೋಷಿಸಿದ್ದು, ಇದರಡಿ ವಿರಾಜಪೇಟೆ ಕ್ಷೇತ್ರಕ್ಕೂ ವಿಶೇಷ ಅನುದಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಹೇಳಿದರು.ಸ್ಥಳೀಯ ಶ್ರೀ ಪೊನ್ನ ಮುತ್ತಪ್ಪ ದೇವಾಲಯದ ಸಮೀಪ ಶುಕ್ರವಾರ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಲೋಕೋಪಯೋಗಿ ಇಲಾಖೆಯ ವತಿಯಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಸಿಎಂಐಡಿಪಿ ಯೋಜನೆಯಡಿ 1.5 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಲ್ಲಿ 1.5 ಕಿಲೋಮೀಟರ್ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಲ್ಲಿ 160 ಮೀಟರ್ ಕಾಂಕ್ರೀಟ್ ರಸ್ತೆ ಹಾಗೂ ಉಳಿದ ಭಾಗದಲ್ಲಿ ಡಾಂಬರೀಕರಣ ಕಾಮಗಾರಿ ನಡೆಯಲಿದೆ ಎಂದರು. ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ಕಾರ್ಯಯೋಜನೆಯನ್ನು ರೂಪಿಸಲಾಗಿದೆ. ಮಳೆ ನಿಂತ ಬಳಿಕ ವಿರಾಜಪೇಟೆಯಿಂದ ಮಡಿಕೇರಿ ಹೋಗುವ ರಸ್ತೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗುತ್ತಿವೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ಮತ್ತು ಬೆಂಬಲ ಸದಾ ಇರಲಿ ಎಂದು ಅವರು ಕೋರಿದ್ದಾರೆ.

ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ವಲಯ ಅಧ್ಯಕ್ಷ ಮಾಚೇಟಿರ ಕುಶು ಕುಶಾಲಪ್ಪ ಸ್ವಾಗತಿಸಿ ಕಾಮಗಾರಿ ಮಾಹಿತಿ ನೀಡಿದರು.

ನಾಪೋಕ್ಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ವನಜಾಕ್ಷಿ, ರೇಣುಕೇಶ್, ಎಂ ಎಚ್ ಅಬ್ದುಲ್ ರೆಹಮಾನ್, ಕೆ,ಎ ಇಸ್ಮಾಯಿಲ್, ಮಾಜಿ ಸದಸ್ಯರುಗಳಾದ, ಕುಲ್ಲೇಟಿರ ಅರುಣ್ ಬೇಬ, ಹೇಮಾ ಅರುಣ್, ಅಮೀನ, ಲಲಿತ , ಮಮ್ಮಾದ್, ಅಜಿಜ್, ಹ್ಯಾರಿಸ್, ಕಕ್ಕಬೆ ಗ್ರಾಮ ಪಂಚಾಯತಿ ಮಾಜಿ

ಅಧ್ಯಕ್ಷ ಸಂಪನ್ ಅಯ್ಯಪ್ಪ, ಸೌಕತ್ ಅಲಿ, ಮತ್ತು ನೇರವಂಡ ಉಮೇಶ್, ಬಿದ್ದಾಟಂಡ ತಮ್ಮಯ್ಯ, ಮಿಥುನ್ ಮಾಚಯ್ಯ, ಮಚ್ಚುರ ರವೀಂದ್ರ, ಮನವಟ್ಟೀರ ದಯಾ ಚಿನ್ನಪ್ಪ, ಸಿರಾಜ್ , ವಾಸಿಮ್, ಝುಬೈರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಗಿರೀಶ್ ಕಾರ್ಯಪಾಲಕ ಅಭಿಯಂತರ ಪ್ರಭು ಮತ್ತು ಪಕ್ಷದ

ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.