ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಕೆಂಭಾವಿ ಮುಖ್ಯ ರಸ್ತೆಯ ಹಳ್ಳದವರೆಗೂ ರಸ್ತೆ ಅತಿಕ್ರಮಿಸಿಕೊಂಡಿದ್ದ ಅಂಗಡಿ - ಮುಂಗಟ್ಟುಗಳನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಬುಧವಾರ ಜೆಸಿಬಿ ಮೂಲಕ ತೆರವುಗೊಳಿಸಿದರು. ರಸ್ತೆಯ ಎರಡೂ ಬದಿಗಳಲ್ಲಿ ಕೆಲವರು ಅಂಗಡಿ ಹಾಗೂ ಮುಂಗಟ್ಟುಗಳನ್ನು ನಿರ್ಮಿಸಿಕೊಂಡಿ ದ್ದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ರಸ್ತೆ ಬದಿಯಲ್ಲಿದ್ದ ತಾತ್ಕಾಲಿಕ ಕಟ್ಟಡಗಳು ಹಾಗೂ ಇತರೆ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು.
ಕನ್ನಡಪ್ರಭ ವಾರ್ತೆ ಹುಣಸಗಿ
ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಕೆಂಭಾವಿ ಮುಖ್ಯ ರಸ್ತೆಯ ಹಳ್ಳದವರೆಗೂ ರಸ್ತೆ ಅತಿಕ್ರಮಿಸಿಕೊಂಡಿದ್ದ ಅಂಗಡಿ - ಮುಂಗಟ್ಟುಗಳನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಬುಧವಾರ ಜೆಸಿಬಿ ಮೂಲಕ ತೆರವುಗೊಳಿಸಿದರು. ರಸ್ತೆಯ ಎರಡೂ ಬದಿಗಳಲ್ಲಿ ಕೆಲವರು ಅಂಗಡಿ ಹಾಗೂ ಮುಂಗಟ್ಟುಗಳನ್ನು ನಿರ್ಮಿಸಿಕೊಂಡಿ ದ್ದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ರಸ್ತೆ ಬದಿಯಲ್ಲಿದ್ದ ತಾತ್ಕಾಲಿಕ ಕಟ್ಟಡಗಳು ಹಾಗೂ ಇತರೆ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು.ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ, ರಸ್ತೆ ಬದಿಯಲ್ಲಿದ್ದ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಅರುಣಕುಮಾರ ಚವ್ಹಾಣ ಅವರ ನೇತೃತ್ವದಲ್ಲಿ ಕೈಗೊಳ್ಳಲಾಯಿತು. ರಸ್ತೆ ಬದಿಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡ್ಡಿ ಯಾಗಿದ್ದ ಶೆಡ್ಡುಗಳನ್ನು ತೆರವುಗೊಳಿಸುವ ಮೂಲಕ ರಸ್ತೆ ಅಗಲೀಕರಣಕ್ಕೆ ಅಗತ್ಯವಾದ ಜಾಗವನ್ನು ಮುಕ್ತಗೊಳಿಸಲಾಯಿತು. ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಸುಗಮವಾಗಿ ನಡೆಯಲು ರಸ್ತೆ ಬದಿಯ ಅತಿಕ್ರಮಣಗಳನ್ನು ತೆರವುಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಪಟ್ಟಣದ ಸಂಚಾರ ವ್ಯವಸ್ಥೆ ಸುಧಾರಿಸುವುದು ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ, ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಈ ಭಾಗದಲ್ಲಿ ವಾಹನಗಳ ಸಂಚಾರ ಮತ್ತಷ್ಟು ಸುಗಮವಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಅರುಣಕುಮಾರ ಚವ್ಹಾಣ ತಿಳಿಸಿದರು.
ಮುಖ್ಯ ರಸ್ತೆಯ ಅತಿಕ್ರಮಣದಿಂದ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಸಾರ್ವಜನಿಕರ ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆ ದೃಷ್ಟಿಯಿಂದ ಅತಿಕ್ರಮಣ ತೆರವುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ರಸ್ತೆ ಅತಿಕ್ರಮಿಸದಂತೆ ವ್ಯಾಪಾರಸ್ಥರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರಲ್ಲದೆ , ಅತಿಕ್ರಮಣ ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಾದ ನಿಂಗರೆಡ್ಡಿ ಜೈ, ಬೀರಪ್ಪ (ಎಸ್‌ಡಿಎ), ಮಾಂತೇಶಕುಮಾರ (ಸೂಪರ್‌ವೈಸರ್) ಸೇರಿದಂತೆ ಪಟ್ಟಣ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.