ಕನ್ನಡಪ್ರಭ ವಾರ್ತೆ ಅಥಣಿ ಪಟ್ಟಣದ ಪ್ರಮುಖ ರಸ್ತೆಗಳನ್ನು ವ್ಯಾಪಾರಸ್ಥರು ಒತ್ತುವರಿ ಮಾಡಿ ವಹಿವಾಟು ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಕಿರಿಕಿರಿ ಹೆಚ್ಚುತ್ತಿದ್ದು, ಬೈಕ್ ಸವಾರರಿಗೆ ಪಾರ್ಕಿಂಗ್ ಸಮಸ್ಯೆ ಸವಾಲಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಸೋಮವಾರ ಪುರಸಭೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಪ್ರಮುಖ ರಸ್ತೆಗಳ ಅತಿಕ್ರಮಣವನ್ನು ತೆರವು ಮಾಡುವ ಮೂಲಕ ವ್ಯಾಪಾರಸ್ಥರಿಗೆ ಬಿಸಿ ಮುಟ್ಟಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ಪಟ್ಟಣದ ಪ್ರಮುಖ ರಸ್ತೆಗಳನ್ನು ವ್ಯಾಪಾರಸ್ಥರು ಒತ್ತುವರಿ ಮಾಡಿ ವಹಿವಾಟು ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಕಿರಿಕಿರಿ ಹೆಚ್ಚುತ್ತಿದ್ದು, ಬೈಕ್ ಸವಾರರಿಗೆ ಪಾರ್ಕಿಂಗ್ ಸಮಸ್ಯೆ ಸವಾಲಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಸೋಮವಾರ ಪುರಸಭೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಪ್ರಮುಖ ರಸ್ತೆಗಳ ಅತಿಕ್ರಮಣವನ್ನು ತೆರವು ಮಾಡುವ ಮೂಲಕ ವ್ಯಾಪಾರಸ್ಥರಿಗೆ ಬಿಸಿ ಮುಟ್ಟಿಸಿದರು.ರವಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಥಣಿ ಪಟ್ಟಣದ ಪೊಲೀಸ್ ಠಾಣೆಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸುವ ಮೂಲಕ ಇಲ್ಲಿನ ಸಮಸ್ಯೆಯನ್ನ ಆಲಿಸಿದ್ದರು. ಕನ್ನಡಪರ ಹೋರಾಟಗಾರರು ಮತ್ತು ಸಾರ್ವಜನಿಕರು ಅಥಣಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ, ಪಾರ್ಕಿಂಗ್ ಸಮಸ್ಯೆ ಕುರಿತು ಹಿರಿಯ ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದರು. ಅಲ್ಲದೆ, ಪಾರ್ಕಿಂಗ್‌ ಸಂಬಂಧ ವ್ಯಾಪಾರಿಯೊಬ್ಬ ಪ್ರಧಾನಿ ಮೋದಿ ಅವರಿಗೆ ನಿಂದಿಸಿದ ಘಟನೆಯೂ ನಡೆದಿತ್ತು. ಇದರಿಂದ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಸೋಮವಾರ ಯಾವುದೇ ಸೂಚನೆ ನೀಡಿದೆ ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದರು. ಈ ಕಾರ್ಯಾಚರಣೆಗೆ ಅಥಣಿಯ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಥಣಿ ಪಟ್ಟಣದ ಮಾರ್ಗವಾಗಿ ಹಾದು ಹೋಗುವ ಜೇವರ್ಗಿ- ಸಂಕೇಶ್ವರ, ಜತ್ತ- ಜಂಬೋಟ್ ರಾಜ್ಯ ಹೆದ್ದಾರಿಗಳ ಎರಡು ಬದಿಯ ಅಂಗಡಿಕಾರರು ಅನೇಕ ವರ್ಷಗಳಿಂದ ಫುಟ್ಪಾತ್ ಅತಿಕ್ರಮಣ ಮಾಡಿ ವ್ಯಾಪಾರ ಮಾಡುತ್ತಿದ್ದಾರೆ. ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಶಿವಯೋಗಿ ವೃತ್ತದ ವರೆಗೆ, ಶಿವಯೋಗಿ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ಒತ್ತುವರಿ ತೆರವು ಕೈಗೊಳ್ಳಲಾಯಿತು.

------

ಕೋಟ್‌

ಜಿಲ್ಲಾಧಿಕಾರಿಗಳ ಆದೇಶದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ತೆರವು ಪ್ರಕ್ರಿಯೆ ಆರಂಭಿಸಿದ್ದೇವೆ. ಅತಿಕ್ರಮಣ ಕಂಡು ಬಂದಲ್ಲಿ ತೆರವುಗೊಳಿಸುವಂತೆ ಈಗಾಗಲೆ ನೋಟಿಸ್ ನೀಡಿದ್ದೇವೆ. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ, ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತೆರವು ಮಾಡುತ್ತಿದ್ದೇವೆ. ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಸಹಕರಿಸಬೇಕು.- ಅಶೋಕ ಗುಡಿಮನಿ, ಪುರಸಭೆ ಮುಖ್ಯಾಧಿಕಾರಿ.