ಅರಸೀಕೆರೆ ನಗರದ ಹಾಸನ ಮುಖ್ಯರಸ್ತೆಯಲ್ಲಿರುವ ಪ್ರಿಯದರ್ಶಿನಿ ಶಾಲೆ ಸಮೀಪ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದ ರಸ್ತೆ ಹಂಪ್‌ಗಳ ಬಗ್ಗೆ ಕನ್ನಡಪ್ರಭ ವರದಿ ಪ್ರಕಟವಾದ ಬೆನ್ನಲ್ಲೇ ನಗರಸಭೆ ಹಾಗೂ ಸಂಬಂಧಿತ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಂಡಿದ್ದಾರೆ. ಇದೀಗ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಿಯದರ್ಶಿನಿ ಶಾಲೆ ಎದುರಿನ ಹಂಪ್ ಅನ್ನು ಸಂಪೂರ್ಣ ರಸ್ತೆಯ ಅಗಲಕ್ಕೆ ವಿಸ್ತರಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ವಾಹನಗಳು ಅತಿವೇಗದಲ್ಲಿ ಚಲಿಸುವುದು ಕಡಿಮೆಯಾಗುವ ನಿರೀಕ್ಷೆಯಿದ್ದು, ಶಾಲಾ ಮಕ್ಕಳ ಸುರಕ್ಷತೆಗೆ ಸಹ ಇದು ಸಹಕಾರಿಯಾಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಅರಸೀಕೆರೆ: ನಗರದ ಹಾಸನ ಮುಖ್ಯರಸ್ತೆಯಲ್ಲಿರುವ ಪ್ರಿಯದರ್ಶಿನಿ ಶಾಲೆ ಸಮೀಪ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದ ರಸ್ತೆ ಹಂಪ್‌ಗಳ ಬಗ್ಗೆ ಕನ್ನಡಪ್ರಭ ವರದಿ ಪ್ರಕಟವಾದ ಬೆನ್ನಲ್ಲೇ ನಗರಸಭೆ ಹಾಗೂ ಸಂಬಂಧಿತ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಂಡಿದ್ದಾರೆ.
ಇಲ್ಲಿಯವರೆಗೆ ರಸ್ತೆ ಮಧ್ಯಭಾಗದಲ್ಲಿ ಮಾತ್ರ ಅಪೂರ್ಣವಾಗಿ ನಿರ್ಮಿಸಲಾಗಿದ್ದ ಹಂಪ್‌ನಿಂದ ವಾಹನ ಸವಾರರು ನಿಯಂತ್ರಣ ತಪ್ಪಿ ಬೀಳುವ ಅಪಾಯ ಹೆಚ್ಚಾಗಿತ್ತು. ವಿಶೇಷವಾಗಿ ಶಾಲಾ ಮಕ್ಕಳ ಓಡಾಟ ಹೆಚ್ಚಿರುವ ಈ ಪ್ರದೇಶದಲ್ಲಿ, ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಇದು ದೊಡ್ಡ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.ಇದೀಗ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಿಯದರ್ಶಿನಿ ಶಾಲೆ ಎದುರಿನ ಹಂಪ್ ಅನ್ನು ಸಂಪೂರ್ಣ ರಸ್ತೆಯ ಅಗಲಕ್ಕೆ ವಿಸ್ತರಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ವಾಹನಗಳು ಅತಿವೇಗದಲ್ಲಿ ಚಲಿಸುವುದು ಕಡಿಮೆಯಾಗುವ ನಿರೀಕ್ಷೆಯಿದ್ದು, ಶಾಲಾ ಮಕ್ಕಳ ಸುರಕ್ಷತೆಗೆ ಸಹ ಇದು ಸಹಕಾರಿಯಾಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.ಸ್ಥಳೀಯರ ಮನವಿ ಹಾಗೂ ಪತ್ರಿಕಾ ವರದಿಗೆ ಸ್ಪಂದಿಸಿ ತ್ವರಿತ ಕ್ರಮ ಕೈಗೊಂಡಿರುವುದಕ್ಕೆ ಸಾರ್ವಜನಿಕರು ತೃಪ್ತಿ ವ್ಯಕ್ತಪಡಿಸಿದ್ದಾರೆ.