ರಸ್ತೆ ದುರವಸ್ಥೆ: ಸಣ್ಣಪುಲಿಕೋಟು ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

| Published : Oct 12 2025, 01:02 AM IST

ರಸ್ತೆ ದುರವಸ್ಥೆ: ಸಣ್ಣಪುಲಿಕೋಟು ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಸಣ್ಣ ಪುಲಿಕೋಟು ಗ್ರಾಮದ ರಸ್ತೆ ದುರವಸ್ಥೆ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಮಾಡಲಾಗಿದೆ.

ದುಗ್ಗಳ ಸದಾನಂದ

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಮೀಪದ ಸಣ್ಣಪುಲಿಕೋಟು ಗ್ರಾಮದ ರಸ್ತೆ ದುರವಸ್ಥೆ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಮಾಡಲಾಗಿದೆ.ಇಲ್ಲಿನ 3 ಕಿ.ಮೀ ರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು ಸಂಚಾರ ದುಸ್ತರವಾಗಿದೆ. ಮಳೆಯಿಂದಾಗಿ ರಸ್ತೆ ಕೆಸರುಮಯವಾಗಿದ್ದು ನಡೆದಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.ಗ್ರಾಮದಲ್ಲಿ ಎಸ್ ಸಿ, ಎಸ್ ಟಿ ಸೇರಿದಂತೆ ವಿವಿಧ ಜನಾಂಗದ 80 ಕುಟುಂಬಗಳು ವಾಸವಿದೆ. ಮಾತ್ರವಲ್ಲದೆ ಮೇಲ್ಕಟ್ಟು ಜಿಎಂಪಿ ಶಾಲೆಯೂ ಈ ರಸ್ತೆಯನ್ನೇ ಅವಲಂಬಿಸಿದ್ದು ಸಂಚಾರ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ರಸ್ತೆ ಸರಿಪಡಿಸುವಂತೆ ಹಲವು ಬಾರಿ ಹಿಂದಿನ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ನೂತನ ಶಾಸಕರಿಗೂ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ರಸ್ತೆ ದುಸ್ಥಿತಿಯನ್ನು ಸರಿಪಡಿಸದಿದ್ದಲ್ಲಿ ಮುಂದಿನ ಚುನಾವಣೆಗೆ 80 ಕುಟುಂಬಗಳ ಮತದಾರರು ಬಹಿಷ್ಕಾರ ಹಾಕುವುದಾಗಿ ಗ್ರಾಮಸ್ಥರ ಪರವಾಗಿ ಕಾವೇರಿ ಮನೆ ಭರತ್ ತಿಳಿಸಿದ್ದಾರೆ.