ಸಾರಾಂಶ
ಹಿರೇಕೆರೂರು: 96 ಕಿಮೀ ರಾಜ್ಯ ಹೆದ್ದಾರಿ, 242 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದ್ದು, ಈ ವಾರದಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ಪತ್ರ ನೀಡಿ ದುರಸ್ತಿ ಮಾಡಲಾಗುವುದು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.ಪಟ್ಟಣದ ಶಾಸಕರ ಜನಸಂಪರ್ಕ ಕಾರ್ಯಾಲಯದಲ್ಲಿ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.96 ಕಿಮೀ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹1.30 ಲಕ್ಷದಂತೆ ₹124.8 ಲಕ್ಷ ಹಾಗೂ 242 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹81 ಸಾವಿರದಂತೆ ₹196.02 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಗುಂಡಿ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.9 ಕಾಮಗಾರಿಗಳನ್ನು ಮರುಟೆಂಡರ್ ಕರೆಯಲಾಗಿದ್ದು, ಇವುಗಳ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ರಸ್ತೆಗಳನ್ನು ಟಾಸ್ಕ್‌ಫೋರ್ಸ್ ಅಡಿಯಲ್ಲಿ ರಸ್ತೆಗಳ ನಿರ್ವಹಣೆಗೆ ಕೂಡಲೇ ಅನುದಾನ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕಾರ್ಯವನ್ನು ತ್ವರಿತವಾಗಿ ಮಾಡಲಾಗುವುದು ಎಂದರು.ಮುಖ್ಯಮಂತ್ರಿಗಳು ಕಳೆದ ತಿಂಗಳು ನೀಡಿದ ₹50 ಕೋಟಿ ಅನುದಾನದಲ್ಲಿ ₹25 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆಗೆ, ₹12.50 ಕೋಟಿ ಅನುದಾನವನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಗೆ ನೀಡಲಾಗಿದೆ. ಈ ಕಾಮಗಾರಿಗಳ ಅಂದಾಜು ಪತ್ರಿಕೆ ಸಿದ್ಧವಾಗಿದ್ದು, ಜಿಲ್ಲಾಧಿಕಾರಿಗಳಿಗೆ ಅನುಮೋದನೆಗಾಗಿ ಕಳುಹಿಸಲಾಗುವುದು. ಶೀಘ್ರವಾಗಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದರು.ಸಭೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ಇಒ ರವಿ ಎನ್., ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಾಲತೇಶ ಕಲ್ಲಮ್ಮನವರ, ನಂದೀಶ ಬಿ., ಅಭಿಯಂತರಾದ ನವೀನ್, ಅಭಿಲಾಷ್ ಟಿ. ಸೇರಿದಂತೆ ಎರಡೂ ಇಲಾಖೆಯ ಅಭಿಯಂತರರು ಇದ್ದರು.