ಸಾರಾಂಶ
ಕಾರು ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಇದರಿಂದ ಪ್ರಾಣ ಹಾನಿ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಪಿಎಸ್ ಐ ಮಹೇಶ್ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಪಟ್ಟಣದಲ್ಲಿ ಬುಧವಾರ ಜಾಥಾ ನಡೆಸಿ ವಾಹನ ಸವಾರರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಿದರು.ಪಟ್ಟಣ ಸಂಚಾರಿ ಠಾಣೆ ಪೊಲೀಸರ ಸಹಯೋಗದಲ್ಲಿ ನಡೆದ ಜಾಥಾಗೆ ಪಿಎಸ್ಐ ಜೆ.ಈ.ಮಹೇಶ್ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳು ಪೊಲೀಸರೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ತೆರಳಿ ದ್ವಿಚಕ್ರ ವಾಹನಗಳ ಸವಾರರಿಗೆ ಗುಲಾಬಿ ಹೂ ನೀಡಿ ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು.
ಪಿಎಸ್ ಐ ಮಹೇಶ್ ಮಾತನಾಡಿ, ರಸ್ತೆ ಅಪಘಾತದಲ್ಲಿ ದಿನನಿತ್ಯ ನೂರಾರು ಜನರು ಸಾವಿಗೀಡಾಗುತ್ತಿದ್ದಾರೆ. ಇದಕ್ಕೆ ಸುರಕ್ಷತಾ ನಿಯಮಗಳನ್ನು ಅನುಸರಿಸದಿರುವುದೇ ಮುಖ್ಯ ಕಾರಣ ಎಂದು ಹೇಳಿದರು.ಕಾರು ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಇದರಿಂದ ಪ್ರಾಣ ಹಾನಿ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮನವಿ ಮಾಡಿದರು.
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ, ಟ್ರ್ಯಾಕ್ಟರ್ ಮತ್ತು ಕಡಿಮೆ ವೇಗದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆದರೂ ಕೆಲ ವೇಳೆ ನಿಷೇಧಿತ ವಾಹನಗಳು ಹೆದ್ದಾರಿಯಲ್ಲಿ ಸಂಚರಿಸಿ ಅಪಘಾತಕ್ಕೀಡಾಗುತ್ತಿವೆ. ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ದಂಡದ ಜೊತೆಗೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲು ಮಾಡಲಾಗುವುದು ಎಂದು ಎಚ್ಚರಿಸಿದರು.------------
27ಕೆಎಂಎನ್ ಡಿ24ಮದ್ದೂರಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಜಾಥಾ ನಡೆಸಿ ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದರು.