ಸಾರಾಂಶ
ಬೇಲೂರು ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್,ರೋಟರಿ ಕ್ಲಬ್ ಹಾಗೂ ಕಬ್ಸ್ ಅಂಡ್ ಬುಲ್ ಬುಲ್ ವಿದ್ಯಾರ್ಥಿಗಳ ತಂಡದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿ, ಸೀಟ್ ಬೆಲ್ಟ್ ಧರಿಸಿ ಕಾರು ಚಲಾಯಿಸಿ, ಕುಡಿದು ವಾಹನ ಚಲಾಯಿಸಬೇಡಿ, ರಸ್ತೆ ನಿಯಮಗಳನ್ನು ತಪ್ಪದೇ ಪಾಲಿಸಿ ಸೇರಿದಂತೆ ಇನ್ನೂ ಹಲವಾರು ಘೋಷಣೆಗಳನ್ನು ಕೂಗಿದರು.
ಬೇಲೂರು: ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್,ರೋಟರಿ ಕ್ಲಬ್ ಹಾಗೂ ಕಬ್ಸ್ ಅಂಡ್ ಬುಲ್ ಬುಲ್ ವಿದ್ಯಾರ್ಥಿಗಳ ತಂಡದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ರೋಟರಿ ಶಾಲೆಯ ಬಳಿಯಿಂದ ಹೊರಟ ಜಾಥಾವು ಅಂಬೇಡ್ಕರ್ ವೃತ್ತದವರೆಗೂ ಸಾಗಿ ಘೋಷಣೆ ಕೂಗಿದ ವಿದ್ಯಾರ್ಥಿಗಳು ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದರು. ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿ, ಸೀಟ್ ಬೆಲ್ಟ್ ಧರಿಸಿ ಕಾರು ಚಲಾಯಿಸಿ, ಕುಡಿದು ವಾಹನ ಚಲಾಯಿಸಬೇಡಿ, ರಸ್ತೆ ನಿಯಮಗಳನ್ನು ತಪ್ಪದೇ ಪಾಲಿಸಿ ಸೇರಿದಂತೆ ಇನ್ನೂ ಹಲವಾರು ಘೋಷಣೆಗಳನ್ನು ಕೂಗಿದರು. ಈ ವೇಳೆ ಶಾಲಾ ಮುಖ್ಯಶಿಕ್ಷಕಿ, ಸಹ ಶಿಕ್ಷಕಿಯರು, ಶಾಲೆಯ ಆಡಳಿತ ಮಂಡಳಿ ಸದಸ್ಯರು, ರೋಟರಿ ಕ್ಲಬ್ ಸದಸ್ಯರು ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.