ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಅಭಿಯಾನ

| Published : Mar 06 2025, 12:33 AM IST / Updated: Mar 06 2025, 12:34 AM IST

ಸಾರಾಂಶ

ದೊಡ್ಡಬಳ್ಳಾಪುರ: ಮನುಷ್ಯರ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.

ದೊಡ್ಡಬಳ್ಳಾಪುರ: ಮನುಷ್ಯರ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.

ಇಲ್ಲಿನ ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸಂಚಾರಿ ಸುರಕ್ಷತಾ ನಿಯಮಗಳ ಕುರಿತು ಅವರು ಮಾತನಾಡಿದರು.

ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬದವರನ್ನು ಮತ್ತು ತಮ್ಮ ಜವಾಬ್ದಾರಿಯನ್ನು ಅರಿತು ವಾಹನ ಚಲಿಸಬೇಕು. ವಾಹನ ಸವಾರರು ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮದ್ಯಸೇವಿಸಿ ವಾಹನ ಚಾಲನೆ ಮಾಡುವುದು, ವಾಹನ ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡುವುದು ಅಪಘಾತಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಈ ವೇಳೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ನಗರದ ಮುಖ್ಯ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ವಾಹನ ಸವಾರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು. ಶಾಲಾ ಸಿಬ್ಬಂದಿ ವರ್ಗ ಮತ್ತು ಪೊಲೀಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.5ಕೆಡಿಬಿಪಿ2-

ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.